ಬೆಂಗಳೂರು:ರಾಜ್ಯದಲ್ಲಿ ಭಾನುವಾರ ಒಂದೇ ದಿನ ಹೊಸದಾಗಿ ಬರೀ 1,565 ಕೋವಿಡ್​-19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಒಟ್ಟು ಪ್ರಮಾಣ 8,61,647ಕ್ಕೆ ತಲುಪಿದೆ.
ಮತ್ತೊಂದೆಡೆ ಸೋಂಕಿನ ಪ್ರಮಾಣಕ್ಕಿಂತಲೂ ಸುಮಾರು ದುಪ್ಪಟ್ಟು ಎಂದರೆ 2,363 ಜನರು ಗುಣವಾಗಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್​ ಕೇರ್ ಸೆಂಟರ್​​ಗಳಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಇದುವರೆಗೂ ಗುಣವಾಗಿ ಬಿಡುಗಡೆಯಾದವರ ಸಂಖ್ಯೆ 8,22,953ಕ್ಕೆ ಏರಿಕೆಯಾಗಿದೆ.
ಅದಾಗ್ಯೂ ರಾಜ್ಯದಲ್ಲಿ 27,146 ಪ್ರಕರಣಗಳು ಸಕ್ರಿಯವಾಗಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿರುವ 746 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ ಒಂದೇ ದಿನ 21 ಜನ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,529ಕ್ಕೆ ಏರಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 6 =
Remember me
