ಬೆಂಗಳೂರು:ಮುಂಬೈನಿಂದ ಬಂದಿರುವ ಪ್ರಯಾಣಿಕರು ಕರ್ನಾಟಕದಲ್ಲಿ ಆತಂಕ ಸೃಷ್ಟಿಸಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯನ್ನು ಹೆಚ್ಚು ಮಾಡುತ್ತಲೇ ಇದ್ದಾರೆ. ಈ ಮೂಲಕ ರಾಜ್ಯದಲ್ಲಿ ಕರೊನಾ ಮಹಾಮಾರಿ ತನ್ನ ರೌದ್ರಾವತಾರನ್ನು ಮುಂದುವರೆಸಿದೆ.
ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆಯವರೆಗೆ ಅಂದರೆ ಅರ್ಧ ದಿನದಲ್ಲಿಯೇ ರಾಜ್ಯದಲ್ಲಿ 84 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ಮುಂಬೈನಿಂದ ಬಂದವರೇ ಹೆಚ್ಚಾಗಿದೆ.
ಇದನ್ನೂ ಓದಿ:ಸೈಕಲ್​ ಕದ್ದ, ಚೀಟಿ ಬರೆದಿಟ್ಟ- ಅದನ್ನು ಓದಿದ ಸೈಕಲ್​ ಮಾಲೀಕ ಕಣ್ಣೀರಾದ… ಅಂಥದ್ದೇನಿತ್ತು ಆ ಚೀಟಿಯಲ್ಲಿ?
ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,231ಕ್ಕೆ ಏರಿಕೆಯಾಗಿದೆ. 521 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ ಸಾವಿನ ಸಂಖ್ಯೆ 37ಕ್ಕೆ ಏರಿದೆ. 672 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೊಸದಾಗಿ ಸೋಂಕು ಕಾಣಿಸಿಕೊಂಡಿರುವ ಪ್ರಕರಣ ಹೀಗಿದೆ:ಬೆಂಗಳೂರು ನಗರ- 18, ಮಂಡ್ಯ-17, ಉತ್ತರ ಕನ್ನಡ- 8, ರಾಯಚೂರು- 6, ಕಲಬುರಗಿ-6, ವಿಜಯಪುರ-5, ಗದಗ- 5, ಯಾದಗಿರಿ- 5, ಹಾಸನ- 4, ಕೊಪ್ಪಳ- 3, ಬಳ್ಳಾರಿ-1, ದಾವಣಗೆರೆ-1, ಬೀದರ್​-1, ಕೊಡಗು-1, ಮೈಸೂರು-1, ಬೆಳಗಾವಿ-1
ಇದನ್ನೂ ಓದಿ:ಭಾರತದ ಕೆಂಪು ದೀಪದ ಹಿಂದಿದೆ ಕರೊನಾ ಭಯಂಕರ ರಹಸ್ಯ- ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಎಂದಿದೆ ಅಮೆರಿಕ
ನಿಜಾಮುದ್ದೀನ್‌ ಮರ್ಕಜ್‌ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:10 − 4 =
Remember me
