ಬೆಂಗಳೂರು:ದಾವಣಗೆರೆಯಲ್ಲಿ ಇಂದು ಕರೊನಾ ಮತ್ತೊಬ್ಬರನ್ನು ಬಲಿ ಪಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಇದು ನಾಲ್ಕನೇ ಸಾವಿನ ಪ್ರಕರಣವಾಗಿದ್ದು, ರಾಜ್ಯದಲ್ಲಿ ಇದು 20ನೇ ಪ್ರಕರಣವಾಗಿದೆ.
55 ವರ್ಷದ ಮಹಿಳೆ ಇಂದು ಮೃತಪಟ್ಟವರು. ಇವರು ತೀವ್ರ ಉಸಿರಾಟದ ತೊಂದರೆಯಿಂದ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಜತೆಗೆ ದಾವಣಗೆರೆ ಜಿಲ್ಲೆಯಲ್ಲಿ ಮೂರು ಮಂದಿ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ದಾವಣಗೆರೆ ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ:ಅರೆ ಇದೇನಿದು ಎಡವಟ್ಟು: ಸೋಂಕಿತೆಯಲ್ಲದಿದ್ರೂ ತುಂಬು ಗರ್ಭಿಣಿಯನ್ನು ಕರೊನಾ ವಾರ್ಡ್​ಗೆ ಹಾಕಿಬಿಟ್ರಲ್ಲಾ!
ರಾಜ್ಯದಲ್ಲಿ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ ಒಟ್ಟಾರೆಯಾಗಿ 701ಕ್ಕೆ ಏರಿಕೆಯಾಗಿದೆ. ಈ ಪೈಕಿ 363 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ ದಾವಣಗೆರೆಯನ್ನು ಹೊರತುಪಡಿಸಿ , ಕಲಬುರಗಿಯಲ್ಲಿ ಮೂವರು, ಬೆಳಗಾವಿಯ ಹಿರೇಬಾಗೇವಾಡಿ ಹಾಗೂ ಬೆಂಗಳೂರು ನಗರದಲ್ಲಿ ತಲಾ ಒಬ್ಬರಿಗೆ ಸೋಂಕು ಬಾಧಿಸಿದೆ.
ಇದನ್ನೂ ಓದಿ:VIDEO: ಹಂದಿಸಮಗಳು ಸಾರ್​ ಹಂದಿಗಳಿವು, ಕಲ್ಲು ತೂರಿದ್ರೆ ಸುಮ್ನೆ ಬಿಟ್ಟಾವೆ?
ನಿಜಾಮುದ್ದೀನ್‌ ಮರ್ಕಜ್‌ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 2 =
Remember me
