ಬೆಂಗಳೂರು: ಹೊಸ ರೂಪಾಂತರ ಕರೊನಾ ಸೋಂಕಿನ ಬೀತಿ ಹಿನ್ನೆಲೆ ರಾಜ್ಯಾದ್ಯಂತ ಡಿ.24ರಿಂದ ಜ.2ರ ವರೆಗೆ ರಾತ್ರಿ 11ರಿಂದ ಬೆಳಗಿನ ಜಾವ 5ರ ವರೆಗೆ ಕರ್ಫ್ಯೂ ಜಾರಿ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಉದ್ದೇಶಿತ ಶಾಲಾ-ಕಾಲೇಜುಗಳ ಪುನರಾರಂಭ ಸದ್ಯಕ್ಕೆ ಅಬಾಧಿತ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ನಡೆದ ಕರೊನಾ ತಾಂತ್ರಿಕ ಸಲಹಾ ಸಮಿತಿ ಹಾಗೂ ಉನ್ನತಾಧಿಕಾರಿಗಳ ಸಭೆ ಬಳಿಕ ಈ ನಿರ್ಧಾರವನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.
ಪದವಿ ಕಾಲೇಜುಗಳು ಈಗಾಗಲೇ ಪ್ರಾರಂಭವಾಗಿವೆ. ಹೊಸ ವರ್ಷ 2021ರ ಜ.1ರಿಂದ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯು ತರಗತಿಗಳು ಹಾಗೂ 6ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ಪುನರಾರಂಭಿಸುವ ತೀರ್ಮಾನದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆಯಿಲ್ಲ. ಮುಂದಿನ ಬೆಳವಣಿಗೆಯನ್ನು ಅವಲೋಕಿಸಿದ ಬಳಿಕ ಮತ್ತೊಮ್ಮೆ ಸಭೆ ಸೇರಿ ಶಾಲಾ-ಕಾಲೇಜುಗಳ ಪುನರಾರಂಭ ನಿರ್ಣಯ ಮರು ಪರಿಶೀಲಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.ಇದನ್ನೂ ಓದಿರಿನೈಟ್​ ಕರ್ಫ್ಯೂ ದಿನಾಂಕ-ಸಮಯದಲ್ಲಿ ಬದಲಾವಣೆ: ಸಿಎಂ ಯಡಿಯೂರಪ್ಪ
ಸೋಂಕು ಹರಡುವಿಕೆ ತಡೆಯಲು ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ಪೂರಕವಾಗಿ ಜನರು ಮುನ್ನೆಚ್ಚರಿಕೆ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಮನವಿ ಮಾಡಿದರು.
ಬ್ರಿಟನ್​ನಿಂದ ಕಳೆದ 2 ದಿನಗಳಲ್ಲಿ ರಾಜ್ಯಕ್ಕೆ ಬಂದು ಕೋವಿಡ್​ ತಪಾಸಣೆಗೆ ಒಳಗಾಗದ 138 ಜನರ ರಕ್ತದ ಮಾದರಿ ಸಂಗ್ರಹಿಸಿ ತಪಾಸಣೆಗೆ ರವಾನಿಸಲಾಗಿದೆ. ಈ ವರದಿ ಕೈಸೇರಲು ಎರಡ್ಮೂರು ದಿನ ಬೇಕು. ನಂತರ ಸೂಕ್ತ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿದೆ. ಹೊಸ ಪ್ರಬೇಧ ಕರೊನಾ ಸೋಂಕು ಪತ್ತೆಯಾದರೆ ಇನ್ನಷ್ಟು ಬಿಗಿಕ್ರಮ ಕೈಗೊಳ್ಳುವುದು ಅನಿರ್ವಾಯವಾಗಲಿದೆ. ಬಹುಶಃ ಡಿ.27ರ ಬಳಿಕ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮತ್ತೊಮ್ಮೆ ಸೇರುವ ಸಭೆಯು ಶಾಲಾ-ಕಾಲೇಜುಗಳ ಪುನರಾರಂಭದ ಭವಿಷ್ಯ ನಿರ್ಧರಿಸಲಿವೆ.
ಕುಮಾರಸ್ವಾಮಿ ಈಗಲೂ… ಮುಂದೆಯೂ ನನ್ನ ಸ್ನೇಹಿತ ಎಂದ ಡಿಕೆಶಿ

ನವ ವಿವಾಹಿತೆಯನ್ನು ಕೊಂದು ಮನೆಯಲ್ಲೇ ಹೂತಿಟ್ಟ! 15 ದಿನದ ಬಳಿಕ ಬಯಲಾಯ್ತು ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
