ಬೆಂಗಳೂರು:ಕರೊನಾ ಸೋಂಕಿನಿಂದ ಮೃತಪಟ್ಟವರನ್ನು ಸಾಮಾನ್ಯ ಸ್ಮಶಾನಗಳಲ್ಲಿ ಅಂತ್ಯಕ್ರಿಯೆ ಮಾಡಲು ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಶವ ಸಂಸ್ಕಾರಕ್ಕೆ ಸರ್ಕಾರದ ಸ್ವತ್ತಿನ ಸ್ಥಳವನ್ನು ಗುರುತಿಸಲಾಗಿದೆ.
ಬೆಂಗಳೂರು ನಗರ ಜಿಲ್ಲಾಡಳಿತದಿಂದ ಸರ್ಕಾರದ ಸ್ವತ್ತಿನ 35.18 ಎಕರೆ ಸ್ಥಳವನ್ನು ಗುರುತಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 12 ವಿದ್ಯುತ್​ ಚಿತಾಗಾರಗಳಲ್ಲಿ ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿ ಮೃತರ ಅಂತ್ಯಕ್ರಿಯೆ ನಡೆಸಲಾಗುತ್ತಿದೆ. ವಾರದ ಹಿಂದೆ ಕಂದಾಯ ಸಚಿವ ಆರ್​. ಅಶೋಕ್​, ಸರ್ಕಾರದ ಗೋಮಾಳ ಜಮೀನುಗಳಲ್ಲಿ ಮೃತರ ಅಂತ್ಯಕ್ರಿಯೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್​. ಶಿವಮೂರ್ತಿ ಬೆಂ.ನಗರ ಜಿಲ್ಲೆಯ 4 ತಾಲೂಕುಗಳಲ್ಲಿ 35 ಎಕರೆ 18 ಗುಂಟೆ ಜಮೀನನ್ನು ಗುರುತಿಸಿದ್ದಾರೆ.ಇದನ್ನೂ ಓದಿರಿಜಿಲ್ಲಾಧಿಕಾರಿಗೂ ಕೋವಿಡ್​ ಸೋಂಕು, ಬೆಚ್ಚಿಬೀಳಿಸುತ್ತೆ ಟ್ರಾವೆಲ್​ ಹಿಸ್ಟರಿ!
ಎಲ್ಲಿವೆ ಸ್ಥಳಗಳು?:ಬೆಂ. ಉತ್ತರ ತಾಲೂಕಿನ ದಾಸನಪುರ ಹೋಬಳಿಯ ಗಿಡ್ಡನಹಳ್ಳಿಯಲ್ಲಿ 4 ಎಕರೆ, ಬೆಂ. ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಗುಳಿಕಮಲೆಯಲ್ಲಿ 8, ಸೋಮನಹಳ್ಳಿಯಲ್ಲಿ 1.18, ತಾವರೆಕೆರೆ ಹೋಬಳಿಯಲ್ಲಿ 5, ಆನೇಕಲ್​ ತಾಲೂಕಿನ ಗಿಡ್ಡನಹಳ್ಳಿಯಲ್ಲಿ 3, ಯಲಹಂಕ ತಾಲೂಕಿನ ಜಾಲ ಹೋಬಳಿಯ ಎಂ. ಹೊಸಹಳ್ಳಿಯಲ್ಲಿ 2, ಮಾರೇನಹಳ್ಳಿಯಲ್ಲಿ 5, ಹೆಸರಘಟ್ಟ ಹೋಬಳಿಯ ಮಾವಳ್ಳಿಪುರದಲ್ಲಿ 5 ಹಾಗೂ ಹುತ್ತನಹಳ್ಳಿಯಲ್ಲಿ 2 ಎಕರೆ ಸ್ಥಳವನ್ನು ಸ್ಮಶಾನಕ್ಕೆ ನಿಗದಿಗೊಳಿಸಲಾಗಿದೆ.
ಜಿಲ್ಲಾಡಳಿತದಿಂದ ಗುರುತಿಸಿದ ಸರ್ವೇ ನಂಬರ್​ ಜಮೀನಿನ ಗಡಿ ಗುರುತಿಸಿ ತಂತಿಬೇಲಿ ಹಾಕಿ ಒತ್ತುವರಿಯಾಗದಂತೆ ರಕ್ಷಣೆ ಮಾಡಿ, ಅದನ್ನು ಸ್ಮಶಾನಕ್ಕಾಗಿ ಬಳಸಲು ಹಸ್ತಾಂತರಿಸುವಂತೆ ಸಂಬಂಧಿಸಿದ ತಾಲೂಕಿನ ತಹಸೀಲ್ದಾರರಿಗೆ ಸೂಚನೆ ನೀಡಲಾಗಿದೆ.
ವಿಧಾನಸೌಧ ಬಳಿ ಅಪಘಾತ, ಎಎಸ್ಐ ಸೇರಿ ನಾಲ್ವರಿಗೆ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + nine =
Remember me
