ಧಾರವಾಡ:ಕರೊನಾ ನಿಯಂತ್ರಣಕ್ಕೆ ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಪಾಲನೆ ಅಗತ್ಯ. ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿ ಸರ್ಕಾರದ ವಿವಿಧ ಇಲಾಖೆಗಳು ನಿರಂತರ ಪ್ರಯತ್ನಿಸುತ್ತಿವೆ. ಜಾಗೃತಿ ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿ ಆಗಿಸಲು ‘ಕರೊನಾ ವೈರಾಣು’ ವೇಷಧಾರಿಯೊಬ್ಬ, ನಗರದ ಸಿಬಿಟಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಕಾಣಿಸಿಕೊಂಡ.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರ ಪರಿಕಲ್ಪನೆಯಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅವರು ನಾದಝೇಂಕಾರ ಸಂಸ್ಥೆಯಿಂದ ಇತ್ತೀಚೆಗೆ ಆಯೋಜಿಸಿದ್ದ ‘ಕರೊನಾ ಕೂಗು’ ನಾಟಕ ನೋಡಿದ್ದರು. ಅದರಲ್ಲಿನ ಕರೊನಾ ವೈರಾಣು ವೇಷಧಾರಿಯ ಪಾತ್ರವನ್ನು ಮೆಚ್ಚಿದ್ದರು. ಆತನನ್ನೇ ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕರೊನಾ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆಗೆ ಬಳಸಿಕೊಳ್ಳಲು ಸೂಚಿಸಿದ್ದಾರೆ. ನಾದ ಝೇಂಕಾರ ಸಂಸ್ಥೆಯ ಯಮನಪ್ಪ ಜಾಲಗಾರ, ತಮ್ಮ ತಂಡದ ಬಸವರಾಜ ಗುಡ್ಡಪ್ಪನವರ ಅವರಿಗೆ ಕರೊನಾ ವೇಷ ತೊಡಿಸಿ, ಜನರ ಮಧ್ಯೆ ಕಳಿಸುತ್ತಿದ್ದಾರೆ. ಪ್ರಸಾದನ ಕಲಾವಿದ ಸಂತೋಷ ಮಹಾಲೆ ವೇಷಭೂಷಣ ಸಿದ್ಧಪಡಿಸಿದ್ದಾರೆ. ಶುಕ್ರವಾರ ಇಡೀ ದಿನ ಈ ವೇಷಧಾರಿ ಸುಮಾರು 10 ಜನರನ್ನು ಹಿಡಿದು ಕೋವಿಡ್ ಪರೀಕ್ಷೆಗಾಗಿ ಆರೋಗ್ಯ ಇಲಾಖೆಯ ತಂಡಕ್ಕೆ ಒಪ್ಪಿಸಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:nineteen − seventeen =
Remember me
