ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುವ 2020ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮುಂದೂಡುವ ಸಾಧ್ಯತೆ ಹೆಚ್ಚಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಚರ್ಚಿಸುತ್ತಿದೆ.
ರಾಜ್ಯದಲ್ಲಿ ಕರೊನಾ ಕಾಲಿಡುವ ಮೊದಲು ಸಿಇಟಿಯನ್ನು ಏಪ್ರಿಲ್​ ಮೂರನೇ ವಾರದಲ್ಲಿ ನಡೆಸಲು ವೇಳಾಪಟ್ಟಿ ಸಿದ್ಧವಾಗಿತ್ತು. ಆದರೆ, ಕರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜುಲೈನಲ್ಲಿ ಪರೀಕ್ಷೆ ನಡೆಸಲು ಮರು ವೇಳಾಪಟ್ಟಿ ರೂಪಿಸಲಾಗಿತ್ತು. ಇದೀಗ ರಾಷ್ಟ್ರಮಟ್ಟದ ಪರೀಕ್ಷೆಗಳೇ ಮುಂದೂಡಿಕೆ ಆಗುತ್ತಿರುವುದರಿಂದ ಸಿಇಟಿಯನ್ನೂ ಮುಂದೂಡಬೇಕಾದ ಅನಿವಾರ್ಯತೆ ಎದುರಾಗಿದೆ.ಇದನ್ನೂ ಓದಿರಿಕೋವಿಡ್​ಗೆ ಔಷಧ ಇದೆ, ಆತಂಕ ಪಡಬೇಡಿ: ಡಿಸಿಎಂ ಅಶ್ವಥನಾರಾಯಣ
2020ನೇ ಸಾಲಿನ ಸಿಇಟಿಗೆ 1.94 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಕರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬದಲಿ ಪರೀಕ್ಷಾ ಕೇಂದ್ರಕ್ಕೂ ಕೆಇಎ ಅವಕಾಶ ಕಲ್ಪಿಸಿತ್ತು. ಆ ಪ್ರಕಾರವಾಗಿ ರಾಜ್ಯದಲ್ಲಿ 26 ಸಾವಿರ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರವನ್ನು ಬದಲು ಮಾಡಿಕೊಂಡಿದ್ದರು. ಪರೀಕ್ಷೆ ನಡೆಸಲು ಕೆಇಎ ಸಕಲ ಸಿದ್ಧತೆಯನ್ನೂ ಮಾಡಿಕೊಂಡಿದೆ.
ಈ ಮಧ್ಯೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದವರು ಇತ್ತೀಚಿಗೆ ವರ್ಗಾವಣೆಗೊಂಡಿದ್ದಾರೆ. ಸದ್ಯ ಕೆಇಎ ಜವಾಬ್ದಾರಿಯನ್ನು ಪಿಯು ಇಲಾಖೆ ನಿರ್ದೇಶಕರಿಗೆ ವರ್ಗಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆಇಎ ಯಾವುದೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವುದು ಕಷ್ಟವಾಗಿದೆ. ಆದರೆ, ಉನ್ನತ ಶಿಕ್ಷಣ ಇಲಾಖೆಯಲ್ಲಿ ಪರೀಕ್ಷೆ ಮುಂದೂಡುವ ಕುರಿತು ಚರ್ಚೆ ನಡೆಯುತ್ತಿದ್ದು, ಶೀಘ್ರದಲ್ಲೇ ಆದೇಶ ಹೊರ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆಯ ಮೂಲಗಳು ಖಚಿತಪಡಿಸಿವೆ.
ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹಾಗಾಗಿ ಜುಲೈ ಮೂರನೇ ವಾರದಲ್ಲಿ ನಡೆಯಬೇಕಿದ್ದ ನೀಟ್​ ಪರೀಕ್ಷೆಯನ್ನೂ ಸೆಪ್ಟೆಂಬರ್​ಗೆ ಮುಂದೂಡಲಾಗಿದೆ.
video/ ಬೆಂಗಳೂರು-ಮೈಸೂರಿನ ಜನರೇ, ಈ ಗ್ರಾಮಕ್ಕೆ ನೀವೇನಾದ್ರೂ ಕಾಲಿಟ್ಟರೆ 5 ಸಾವಿರ ರೂ. ದಂಡ ಕಟ್ಟಬೇಕು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
