ವಿಜಯಪುರ:ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್​ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯ ಎನಿಸಿಕೊಂಡಿರುವ ಅಕ್ಕಮಹಾದೇವಿ ವಿವಿ ವಿದ್ಯಾರ್ಥಿಗಳಲ್ಲಿ ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಒಂದು ವಾರದ ಮಟ್ಟಿಗೆ ರಜೆ ಘೋಷಣೆ ಮಾಡಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.
ಐದಕ್ಕಿಂತ ಹೆಚ್ಚು ಕೋವಿಡ್​ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಅಂತಹ ಶಾಲೆ, ಕಾಲೇಜು, ವಿದ್ಯಾಲಯಗಳಿಗೆ ರಜೆ ಘೋಷಣೆ ಮಾಡಬೇಕೆಂದು ಸರ್ಕಾರದ ಮಾರ್ಗಸೂಚಿ ಇರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಐದಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರಿಗೆ ಪಾಸಿಟಿವ್ ದೃಢಪಟ್ಟ ಕಾರಣ, ಜನವರಿ 21 ರಿಂದ ಜ. 27ರವರೆಗೆ ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳಿಗೂ ರಜೆ ಘೋಷಣೆ ಮಾಡಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.
ಒಂದು ವಾರದ ನಂತರ ವಿಶ್ವವಿದ್ಯಾಲಯವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿದ ಬಳಿಕ ಪ್ರಾರಂಭಿಸಲಾಗುವುದು ಎಂದು ತಿಳಿಸಲಾಗಿದೆ.
ಎರಡು ಆಂಬ್ಯುಲೆನ್ಸ್​​ಗಳಿಗೆ ದಾರಿ ಬಿಡದೆ ಪುಂಡಾಟ; ಕಾರು ಸಮೇತ ಚಾಲಕನನ್ನು ಬಂಧಿಸಿದ ಮಂಗಳೂರು ಪೊಲೀಸ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 2 =
Remember me
