ಬೆಂಗಳೂರು:ಮಹಾಮಾರಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಆರೋಗ್ಯ ಸಚಿವರೊಂದಿಗೆ ಶುಕ್ರವಾರ ತುರ್ತುಸಭೆ ನಡೆಸಿದರು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.
1.ಕಾರ್ಪೋರೇಟ್ ವಲಯದ ಆಸ್ಪತ್ರೆಗಳು ಸಮೀಪದ ಹೋಟೆಲ್​ಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಕಡಿಮೆ ರೋಗ ಲಕ್ಷಣಗಳುಳ್ಳ ರೋಗಿಗಳನ್ನು ನೋಡಿಕೊಳ್ಳಲು ತಾತ್ಕಾಲಿಕ ಆಸ್ಪತ್ರೆ ಆರಂಭಿಸಲು ಕ್ರಮ.2.ಹೆಚ್ಚು ರೋಗ ಲಕ್ಷಣಗಳುಳ್ಳ ಅಗತ್ಯವಿರುವ ರೋಗಿಗಳನ್ನು ಮಾತ್ರ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲು ಕ್ರಮ ವಹಿಸುವುದು.3.ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಹಾಸಿಗೆಗಳನ್ನು ಸರ್ಕಾರದಿಂದ ದಾಖಲಿಸುವ ರೋಗಿಗಳಿಗೆ ಕಾಯ್ದಿರಿಸಲು ಕೂಡಲೇ ಕ್ರಮ ಕೈಗೊಳ್ಳುವುದು.4.ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 1000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು.5.ಸರ್ಕಾರಿ ಆಸ್ಪತ್ರೆಗಳಲ್ಲಿ 1000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು.6.ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 5,000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡುವುದು.7.ಅಗತ್ಯವಿರುವ ರೋಗಿಗಳಿಗೆ ಕೂಡಲೇ ಚಿಕಿತ್ಸೆ ನೀಡಲು ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳನ್ನು ಹಾಗೂ ಬಿಡಬ್ಲ್ಯುಎಸ್ಎಸ್​ಬಿ, ಬೆಸ್ಕಾಂ ಮತ್ತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸುವುದು.8.ಕರೊನಾ ವೈರಸ್​ನಿಂದ ತೀವ್ರತರವಾಗಿ ಬಳಲುತ್ತಿರುವ ರೋಗಿಗಳಿಗೆ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು. ಉಳಿದಂತೆ ಕರೊನಾ ಲಕ್ಷಣಗಳಿಲ್ಲದ ರೋಗಿಗಳಿಗೂ ತಾತ್ಕಾಲಿಕ ಚಿಕಿತ್ಸಾ ಕೇಂದ್ರಗಳಲ್ಲಿ ಚಿಕಿತ್ಸೆ ನೀಡುವುದು ಹಾಗೂ ಅಗತ್ಯವಿರುವಷ್ಟು ದಿನ ಮಾತ್ರ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿ ಗುಣಮುಖರಾದ ಕೂಡಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದು.9.ರಾಜ್ಯದಲ್ಲಿ ಸದ್ಯಕ್ಕೆ Remdesivir ಕೊರತೆ ಇರುವುದಿಲ್ಲ. ಆದಾಗ್ಯೂ ಹೆಚ್ಚುವರಿ ಡೋಸ್ ಖರೀದಿಸಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅದನ್ನು ಅಂತಿಮಗೊಳಿಸಿ ಹೆಚ್ಚುವರಿ ಡೋಸ್​ ಸಂಗ್ರಹಿಸಲು ಕ್ರಮ ಕೈಗೊಳ್ಳುವುದು.10.ರಾಜ್ಯದಲ್ಲಿ ಸದ್ಯ ಆಕ್ಸಿಜನ್ ಕೊರತೆ ಇಲ್ಲ. ಆದಾಗ್ಯೂ 5,000 ಆಕ್ಸಿಜನ್ ಸಿಲಿಂಡರ್​ಗಾಗಿ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುವುದು.11.ಪದೇಪದೆ ಆಕ್ಸಿಜನ್ ಸಿಲಿಂಡರ್​ಗಳ ಬದಲಾವಣೆ ತಪ್ಪಿಸಲು ಜಂಬೋ ಸಿಲಿಂಡರ್​ ಖರೀದಿಸಲು ಕೂಡಲೇ ಕ್ರಮ.12.ಈಗಾಗಲೇ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಿದ್ದು, ಅದೇ ರೀತಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲೂ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಲು ಟೆಂಡರ್ ಕರೆಯಲಾಗಿದೆ. ಕೂಡಲೇ ಅದನ್ನು ಅಂತಿಮಗೊಳಿಸಿ ಘಟಕ ಸ್ಥಾಪಿಸಲು ತ್ವರಿತ ಕ್ರಮ ಜರುಗಿಸುವುದು.13.ಫ್ರಂಟ್​ಲೈನ್ ವರ್ಕ್​ಗಳಾದ ವೈದ್ಯರು, ನರ್ಸ್​ಗನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಕೂಡಲೇ ಕ್ರಮ.14.ರಾಜ್ಯಾದ್ಯಂತ ಕಾಟ್ಯಾಂಕ್ಟ್ ಟ್ರೇಸಿಂಗ್​ ತ್ವರಿತಗೊಳಿಸುವುದು.15.ಹೋಂ ಐಸೋಲೇಷನ್ ಇರುವ ರೋಗಿಗಳಿಗೆ ಮುದ್ರೆ ಹಾಕುವುದು.16.ಪ್ರತಿದಿನ ನಡೆಸುವ ಕೋವಿಡ್ ಟೆಸ್ಟ್ ಫಲಿತಾಂಶ (ಟೆಸ್ಟ ರಿಪೋರ್ಟ) 24 ಗಂಟೆಯೊಳಗೆ ಲಭ್ಯವಾಗುವಂತೆ ಕ್ರಮ. ಟೆಸ್ಟಿಂಗ್ ಅವಧಿಯನ್ನು ಇನ್ನೂ ಕಡಿಮೆಗೊಳಿಸಲು ಕ್ರಮ.17.ಕಟ್ಟುನಿಟ್ಟಾಗಿ ಕಂಟೈನ್ಮೆಂಟ್ ಝೋನ್​ ಮತ್ತು ಮೈಕ್ರೋ ಕಂಟೈನ್ಮೆಂಟ್ ಝೋನ್​ಗಳ ಜಾರಿ.18.ಜನರು ಅನಗತ್ಯವಾಗಿ ಗುಂಪು ಸೇರುವುದನ್ನು ತಡೆಗಟ್ಟುವುದು.19.ಬೇಡಿಕೆಗೆ ಅನುಗುಣವಾಗಿ ಉಚಿತವಾಗಿ 108 ಸೇರಿ ಅಗತ್ಯ ಆಂಬುಲೆನ್ಸ್ ಅನ್ನು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೆಂದ್ರಗಳಲ್ಲೂ ಲಭ್ಯವಿರುವಂತೆ ನೋಡಿಕೊಳ್ಳುವುದು.20.ಬೆಂಗಳೂರು ನಗರದಲ್ಲಿ ಒಟ್ಟಾರೆಯಾಗಿ 400 ಆಂಬುಲೆನ್ಸ್​ಗಳನ್ನು ಕೋವಿಡ್ ರೋಗಿಗಳಿಗಾಗಿ ಉಚಿತ ಸೇವೆ ಒದಗಿಸಲು ಮೀಸಲು.21.ಬೆಂಗಳೂರು ನಗರದಲ್ಲಿ ಕೋವಿಡ್​ನಿಂದಾಗಿ ಮೃತಪಟ್ಟವರ ಶವ ಸಾಗಿಸಲು 49 ಆಂಬುಲೆನ್ಸ್​ಗಳನ್ನು ಉಚಿತವಾಗಿ ಸೇವೆ ಒದಗಿಸಲು ಮೀಸಲು.22.ಕೋವಿಡ್​ನಿಂದಾಗಿ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಚಿತಾಗಾರಗಳಲ್ಲಿ ಉಚಿತವಾಗಿ ನೆರವೇರಿಸುವುದು.23.ಬಿಬಿಎಂಪಿ ತನ್ನ ಎಲ್ಲ ವಲಯಗಳ ಮತ್ತು ನಿಯಂತ್ರಣ ಕೊಠಡಿಗಳನ್ನು ಸಜ್ಜುಗೊಳಿಸಿ ಕೋವಿಡ್ ರೋಗಿಗಳ ಸಹಾಯಕ್ಕೆ ಬದ್ಧರಾಗಿರುವಂತೆ ಕ್ರಮ ವಹಿಸುವುದು ಹಾಗೂ ಸಹಾಯವಾಣಿಗಳಿಗೆ ನುರಿತ ವ್ಯಕ್ತಿಗಳನ್ನು ನೇಮಿಸಿ ಸದೃಢಗೊಳಿಸುವುದು.
ಅಪ್ರಾಪ್ತರ ಲವ್​ ಕೇಸ್​: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನಿಂದ ಬಿತ್ತು ಬಾಲಕನ ಹೆಣ, ಊರಲ್ಲಿ ಪ್ರಕ್ಷುಬ್ಧ ವಾತಾವರಣ

ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್​ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + nine =
Remember me
