ಪಾಂಡವಪುರ:ಕರೊನಾ ರೋಗದ ವಿರುದ್ಧ ಧೈರ್ಯವಾಗಿ ಹೋರಾಡಿ ಎಂದು ವೈದ್ಯಲೋಕ ಎಷ್ಟೇ ಜಾಗೃತಿ ಮೂಡಿಸಿದರೂ ಕೆಲವರು ದುಡುಕಿನ ನಿರ್ಧಾರಕ್ಕೆ ಬರುತ್ತಿರುವುದು ದುರಂತ. ಕಳೆದ ತಿಂಗಳು ಕರೊನಾ ಸೋಂಕು ಇರುವುದು ತಿಳಿಯುತ್ತಿದ್ದಂತೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಇಂತಹದ್ದೇ ಮತ್ತೊಂದು ಪ್ರಕರಣಕ್ಕೆ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಪರೀಕ್ಷೆಯ ವರದಿ ಬರುವ ಮುನ್ನವೇ ವೃದ್ಧನ ಬುದುಕು ದುರಂತ ಅಂತ್ಯಕಂಡಿದೆ.
ಕೋವಿಡ್​-19 ಪರೀಕ್ಷೆಗೆ ಒಳಗಾಗಿದ್ದ ಹಾರೋಹಳ್ಳಿ ಗ್ರಾಮದ ನಿವಾಸಿ ಚಿಕ್ಕಣ್ಣ (60) ಸೋಂಕು ದೃಢವಾಗಬಹುದು ಎಂದು ಹೆದರಿ ಸೋಮವಾರ ಸಮೀಪದ ವಿಶ್ವೇಶ್ವರಯ್ಯ ನಾಲೆಗೆ ಹಾರಿದ್ದಾರೆ.
ಇದನ್ನೂ ಓದಿರಿದೇವರಿಗೆ ಕೈಮುಗಿಯುತ್ತಿದ್ದಾಗಲೇ ವ್ಯಕ್ತಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ!
ಇತ್ತೀಚೆಗೆ ಜ್ವರ ಕಾಣಿಸಿಕೊಂಡ ಪರಿಣಾಮ ಪಟ್ಟಣದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕ್ಕಣ್ಣ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಮುನ್ನೆಚ್ಚರಿಕೆ ಕ್ರಮವಾಗಿ ಕರೊನಾ ಪರೀಕ್ಷೆಗೆ ಒಳಗಾಗುವಂತೆ ವೈದ್ಯರು ಸಲಹೆ ನೀಡಿ ಜತೆಗೆ ಗಂಟಲು ದ್ರವ ಪಡೆದಿದ್ದರು. ಪರೀಕ್ಷಾ ವರದಿ ಬರುವವರೆಗೂ ಕಾಯುವಂತೆ ವೈದ್ಯರು ತಿಳಿಸಿದ್ದರು ಎನ್ನಲಾಗಿದೆ.
ಮನೆಯಲ್ಲೇ ಕ್ವಾರಂಟೈನ್​ನಲ್ಲಿದ್ದ ವೃದ್ಧ, ವರದಿ ಬರುವ ಮುನ್ನವೇ ತನಗೆ ಕರೊನಾ ಪಾಸಿಟಿವ್​ ಆಗಿರಬಹುದು ಎಂದು ಭಯಗೊಂಡು ಸೋಮವಾರ ಬೆಳಗ್ಗೆ ಮನೆಯಿಂದ ಹೊರಟು ಹಾರೋಹಳ್ಳಿ ಸಮೀಪ ವಿಶ್ವೇಶ್ವರಯ್ಯ ನಾಲೆಗೆ ಹಾರಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಕೋವಿಡ್​ ಪರೀಕ್ಷಾ ವರದಿ ಇನ್ನೂ ಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಕಿರುಕುಳಕ್ಕೆ ಯುವ ವಕೀಲ ಬಲಿ, ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ

ಮಗನನ್ನು ನೋಡಲು ಹೊರಟ ದಂಪತಿ ದಾರಿಯಲ್ಲೇ ಹೆಣವಾದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − one =
Remember me
