ಬೆಂಗಳೂರು:ರಾಜ್ಯದಲ್ಲಿ ಲಾಕ್​ಡೌನ್​ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆಗೆ ಅಂತೂ ತೆರೆ ಬಿದ್ದಿದೆ. ರಾಜ್ಯಾದ್ಯಂತ ಸಂಪೂರ್ಣವಾಗಿ ಲಾಕ್​ಡೌನ್​ ಮಾಡದೆಯೇ ವೀಕೆಂಡ್​ ಲಾಕ್​ಡೌನ್​ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಅದರ ಜತೆಗೆ ಮುಂದಿನ 14 ದಿನಗಳಿಗೆ ಕಠಿಣ ಕ್ರಮಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ಸರ್ಕಾರದ ಮಾರ್ಗಸೂಚಿಯ ಪ್ರಮುಖ ಅಂಶಗಳು ಈ ಕೆಳಗಿನಂತಿವೆ:* ರಾಜ್ಯದ ಪ್ರತಿ ಜಿಲ್ಲೆಯಲ್ಲಿ ರಾತ್ರಿ 9ರಿಂದ ಬೆಳಗ್ಗೆ 6ವರೆಗೆ (ಏಪ್ರಿಲ್​ 21ರಿಂದ ಮೇ 4ರವರೆಗೆ) ನೈಟ್​ ಕರ್ಫ್ಯೂ ಜಾರಿಯಲ್ಲಿರಲಿದೆ.* ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಲಾಕ್​ಡೌನ್​ ಜಾರಿಯಲ್ಲಿರಲಿದೆ.* ಶಾಲೆ, ಕಾಲೇಜುಗಳು ಸಂಪೂರ್ಣವಾಗಿ ಬಂದ್​. ಆನ್​ಲೈನ್​ ತರಗತಿಗೆ ಮಾತ್ರವೇ ಅವಕಾಶ* ಸಿನಿಮಾ ಹಾಲ್​ಗಳು, ಶಾಪಿಂಗ್​ ಮಾಲ್​ಗಳು, ಜಿಮ್​, ಯೋಗಾ ಸೆಂಟರ್​, ಸ್ವಿಮ್ಮಿಂಗ್​ ಪೂಲ್​, ಸ್ಪೋರ್ಟ್ಸ್​ ಕಾಂಪ್ಲೆಕ್ಸ್​, ಸ್ಪಾ, ಬಾರ್​, ಆಡಿಟೋರಿಯಂನಂತಹ ಸ್ಥಳಗಳು ಮುಚ್ಚಲಾಗುವುದು* ಸ್ವಿಮ್ಮಿಂಗ್​ ಫೆಡರೇಷನ್​ ಆಫ್​ ಇಂಡಿಯಾದಿಂದ ಅನುಮತಿ ಪಡೆದ ಸ್ವಿಮ್ಮಿಂಗ್​ ಫೂಲ್​ಗಳನ್ನು ಮಾತ್ರ ತೆರೆಯಲು ಅನುಮತಿ* ಸಾರ್ವಜನಿಕ, ರಾಜಕೀಯ ಸೇರಿ ಎಲ್ಲ ಕಾರ್ಯಕ್ರಮಗಳಿಗೆ ನಿರ್ಬಂಧ* ದೇವಸ್ಥಾನ ಸೇರಿ ಎಲ್ಲ ಧಾರ್ಮಿಕ ಸ್ಥಳಗಳನ್ನು ಮುಚ್ಚಲಾಗುವುದು* ಹೋಟೆಲ್​ ಮತ್ತು ರೆಸ್ಟೋರೆಂಟ್​ಗಳಲ್ಲಿ ಪಾರ್ಸೆಲ್​ ಮಾತ್ರಕ್ಕೆ ಅವಕಾಶ* ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮತಿ* ಕಾರ್ಖಾನೆಗಳಲ್ಲಿ ಕೆಲಸ ನಡೆಸಲು ಅನುಮತಿ* ಆಹಾರ ಸಂಬಂಧಿ ಅಂಗಡಿಗಳು, ದಿನಸಿ ಅಂಗಡಿ, ಹಣ್ಣು ತರಕಾರಿ ಅಂಗಡಿ, ಡೇರಿ, ಮಿಲ್ಕ್​ ಬೂತ್​, ಮೀನು * ಮಾಂಸದ ಅಂಗಡಿ ತೆರೆಯಲು ಅನುಮತಿ* ಲಾಡ್ಜ್​ಗಳನ್ನು ತೆರೆದಿಡಲು ಅನುಮತಿ* ಬಾರ್​, ಎಂಆರ್​ಪಿಗಳಲ್ಲಿ ಪಾರ್ಸಲ್​ ನೀಡಲು ಮಾತ್ರ ಅವಕಾಶ* ಬ್ಯಾಂಕ್​, ಇನ್ಶೂರೆನ್ಸ್​ ಸಂಸ್ಥೆ, ಮಾಧ್ಯಮಕ್ಕೆ ಅನುಮತಿ* ಇ ಕಾಮರ್ಸ್​ ವೇದಿಕೆಯಲ್ಲಿ ಡೆಲಿವರಿ ಮಾಡಲು ಅನುಮತಿ* ಐಟಿ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಹೊರೆತುಪಡಿಸಿ ಬೇರೆಲ್ಲ ಸಿಬ್ಬಂದಿಗೆ ವರ್ಕ್​ ಫ್ರಂ ಹೋಂ* ಖಾಸಗಿ ಸಂಸ್ಥೆಗಳಲ್ಲಿ ಕಡಿಮೆ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ* ಸರ್ಕಾರಿ ಕಚೇರಿಗಳಲ್ಲಿ ಶೇ. 50 ಸಿಬ್ಬಂದಿ ಕೆಲಸಕ್ಕೆ ಅನುಮತಿ* ಜಿಲ್ಲೆಗಳ ನಡುವೆ ಮತ್ತು ರಾಜ್ಯಗಳ ನಡುವೆ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ* ಮೆಟ್ರೋ, ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿ ಎಲ್ಲ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಅನುಮತಿ* ಮದುವೆಗಳಲ್ಲಿ ಕೇವಲ 50 ಜನರಿಗೆ ಅವಕಾಶ* ಅಂತ್ಯಕ್ರಿಯೆಗಳಲ್ಲಿ ಕೇವಲ 20 ಜನರಿಗೆ ಅವಕಾಶ
ದೇಶದಲ್ಲಿ 44 ಲಕ್ಷ ಡೋಸೇಜ್​ ಕರೊನಾ ಲಸಿಕೆ ವ್ಯರ್ಥ! ಆರ್​ಟಿಐನಲ್ಲಿ ಬಯಲಾಯ್ತು ವರದಿ

ಈ ಸೋಂಕಿತರಿಗೆ ಮನೆಯಲ್ಲೇ ಇರಲು ಅವಕಾಶ! ಹೋಂ ಐಸೋಲೇಷನ್​ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four + 4 =
Remember me
