ಬಳ್ಳಾರಿ:ನಗರದ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 35 ವರ್ಷದ ಶುಶ್ರೂಷಕನಿಗೆ ಕರೊನಾ ಪಾಸಿಟಿವ್​ ಬಂದಿದೆ. ಇದು ಜಿಲ್ಲೆಯಲ್ಲಿ ಕರೊನಾ ವಾರಿಯರ್​ಗೆ ಸೋಂಕು ತಗುಲಿರುವ ಮೊದಲ ಪ್ರಕರಣ. ಸೋಂಕಿತನಿಗೆ ರೋಗದ ಯಾವುದೇ ಲಕ್ಷಣವೂ ಕಂಡು ಬಂದಿಲ್ಲ. ಕೆಲಸದ ವೇಳೆ ಸುರಕ್ಷತಾ ಕ್ರಮವನ್ನೂ ಅನುಸರಿದ್ದರು. ಆದರೂ ಕೋವಿಡ್​19 ದೃಢಪಟ್ಟಿದೆ!
ಸೋಂಕಿತರಿಗೆ ಚಿಕಿತ್ಸೆ ನೀಡುವ ವಾರ್ಡ್​ನಲ್ಲಿ ಡ್ಯೂಟಿ ಮಾಡುತ್ತಿದ್ದ ಇವರನ್ನು 14 ದಿನಗಳ ಕೆಲಸದ ಬಳಿಕ ನಿಯಮದಂತೆ 14 ದಿನದ ಹೋಟೆಲ್​ ಕ್ವಾರಂಟೈನ್​ನಲ್ಲಿದ್ದರು. ಆ ವೇಳೆ ಕರೊನಾ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.
ಇದನ್ನೂ ಓದಿರಿನವ ವಿವಾಹಿತ ಆತ್ಮಹತ್ಯೆ, ಕ್ವಾರಂಟೈನ್​ ಕೇಂದ್ರದಲ್ಲಿ ನಡೆದದ್ದಾದರೂ ಏನು?
ಸೋಂಕಿತನಿಗೆ ರೋಗದ ಯಾವುದೇ ಲಕ್ಷಣ ಕಂಡು ಬಂದಿಲ್ಲ. ಪಿಪಿಇ ಕಿಟ್​ ಸೇರಿ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಶುಶ್ರೂಷಕ ಕಾರ್ಯನಿರ್ವಹಿಸಿದ್ದ. ಆದಾಗ್ಯೂ ಸೋಂಕು ಹೇಗೆ ಹರಡಿತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್​.ಎಸ್​. ನಕುಲ್​ ತಿಳಿಸಿದ್ದಾರೆ. ಸೋಂಕಿತ ಕ್ವಾರಂಟೈನ್​ನಲ್ಲಿದ್ದ ಹಿನ್ನೆಲೆಯಲ್ಲಿ ಕಂಟೇನ್ಮೆಂಟ್ ಪ್ರದೇಶ ಘೋಷಣೆಯಿಲ್ಲ.
ಇದನ್ನೂ ಓದಿರಿVIDEO/ ಕೊನೆಗೂ ಸೇಡು ತೀರಿಸಿಕೊಂಡ ಎಮ್ಮೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 5 =
Remember me
