ಕಲಬುರಗಿ:ಹತ್ತು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗೆ ಕರೊನಾ ದೃಢಪಟ್ಟಿದ್ದು, ಈತನನ್ನು ಬಂಧಿಸಿದ್ದ ಪೊಲೀಸರಿಗೂ ಸೋಂಕು ಹರಡುವ ಭೀತಿ ಆವರಿಸಿದೆ.
ನಗರ ಹೊರವಲಯದ ಗ್ರಾಮದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದ ಪ್ರಕರಣ ಸಬಂಧ ಅಳಂದ ತಾಲೂಕಿನ ಧುತ್ತರಗಾಂವ ಗ್ರಾಮದ 21 ವರ್ಷದ ಯುವಕನನ್ನು ಜೂ.18ರಂದು ಮಹಿಳಾ‌ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದರು. ನಂತರ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿತ್ತು. ಆರೋಪಿಗೆ ಮಾಡಲಾದ ಕರೊನಾ ಪರೀಕ್ಷೆಯ ವರದಿ ಪಾಸಿಟಿವ್​ ಬಂದಿದ್ದು, ಪರಿಣಾಮ ಇನ್​ಸ್ಪೆಕ್ಟರ್ ಸೇರಿ 13 ಪೊಲೀಸರು ಕ್ವಾರಂಟೈನ್ ಆಗಿದ್ದಾರೆ.ಇದನ್ನೂ ಓದಿರಿಪಿಪಿಇ ಕಿಟ್​ ಧರಿಸದೆ ಕೋವಿಡ್​ ಸೋಂಕಿತನ ಅಂತ್ಯಸಂಸ್ಕಾರ ನೆರವೇರಿಸಿದ ಶಾಸಕ!
ಅತ್ಯಾಚಾರ ಆರೋಪಿಯನ್ನು ಬಂಧಿಸಿದ ಕೂಡಲೇ ಮುಂಜಾಗ್ರತಾ ಕ್ರಮವಾಗಿ ಆತನ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿತ್ತು. ಸೋಮವಾರ ಬಂದ ವರದಿಯಲ್ಲಿ ಆರೋಪಿಗೆ(ಪಿ-9372) ಸೋಂಕು ಇರುವುದು ಗೊತ್ತಾಗಿದೆ. ಪೊಲೀಸ್​ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಸೀಲ್​ಡೌನ್ ಮಾಡುವ ಸಾಧ್ಯತೆ ಇದೆ.
ಕಾರಾಗೃಹದಲ್ಲಿ ಆರೋಪಿಯನ್ನು ಐಸೋಲೇಷನ್‍ನಲ್ಲಿ ಇಟ್ಟಿದ್ದರಿಂದ ಅಲ್ಲಿನ ಸಿಬ್ಬಂದಿಗೆ ಯಾವುದೇ ಆತಂಕವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಎನ್. ಸತೀಶ ಕುಮಾರ ತಿಳಿಸಿದ್ದಾರೆ.
ಡಿಸಿ ಕಚೇರಿ ಎದುರಲ್ಲೇ ಜಿಪಂ ಸದಸ್ಯನನ್ನು ಕೊಚ್ಚಿದ ದುಷ್ಕರ್ಮಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
