ಮಂಡ್ಯ: ಕೆಆರ್​ಪೇಟೆಯ ಪೊಲೀಸ್​ ಪೇದೆಗೆ ಕರೊನಾ ವೈರಸ್​ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಪಟ್ಟಣದ 2 ಠಾಣೆಗಳನ್ನು ಸೀಲ್​ಡೌನ್​ ಮಾಡಲಾಗಿದೆ.
ಕೆಆರ್​ಪೇಟೆ ಟೌನ್​ ಠಾಣೆಯ ಕ್ರೈಂ ವಿಭಾಗದ ಮುಖ್ಯ ಪೇದೆಗೆ ಸೋಂಕು ಹರಡಿರುವುದು ದೃಢಪಟ್ಟ ನಂತರ ಕೆಆರ್​ಪೇಟೆ ಟೌನ್​ ಹಾಗೂ ಗ್ರಾಮಾಂತರ ಠಾಣೆಗಳಿಗೆ ಸೋಂಕು ನಿವಾರಕ ಸಿಂಪಡಿಸಿ ಸೀಲ್​ಡೌನ್​ ಮಾಡಲಾಗಿದೆ.ವೈರಸ್​ ಸೋಂಕಿತ ಪೇದೆಯನ್ನು ಮಂಡ್ಯದ ಮಿಮ್ಸ್​ ಆಸ್ಪತ್ರೆಗೆ ಐಸೋಲೇಷನ್​ ವಾರ್ಡ್​ಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸೋಂಕಿತ ಪೇದೆ ಟೌನ್ ಠಾಣೆಯ ಮಾಹಿತಿ ಸಂಗ್ರಹಗಾರ.
ಪೇದೆಯಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇವರ ಸಂಪರ್ಕಕ್ಕೆ ಬಂದಿದ್ದ ಎಲ್ಲರನ್ನೂ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ. ಎರಡು ಠಾಣೆಗಳ ಬಾಗಿಲು ಮುಚ್ಚಿರುವ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯ ದೂರುಗಳನ್ನು ಕಿಕ್ಕೇರಿ ಠಾಣೆಯಲ್ಲಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
ರಂಜಾನ್ ಮನೆಯಲ್ಲೇ ಆಚರಿಸಿ: ರಾಜ್ಯ ಸರ್ಕಾರದ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
