ಬೆಂಗಳೂರು:ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ಗೆ ಕರೊನಾ ಸೋಂಕು ತಗುಲಿದ್ದು ದೃಢಪಟ್ಟಿದ್ದು, ಸದ್ಯ ಹೋಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.
ಇಂದು ತಮ್ಮ ಫೇಸ್​ಬುಕ್ ಮತ್ತು ಟ್ವಿಟರ್​ ಅಕೌಂಟ್​ನಲ್ಲಿ ಈ ವಿಚಾರವನ್ನು ಸುರೇಶ್ ಕುಮಾರ್​ ತಿಳಿಸಿದ್ದಾರೆ. ನನಗೆ ರೋಗದ ಯಾವುದೇ ಲಕ್ಷಣಗಳಿಲ್ಲ. ಆದರೂ ಕೊವಿಡ್​-19 ಸೋಂಕು ಇರುವುದರಿಂದ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ. ಯಾವುದೇ ಆತಂಕವಿಲ್ಲ ಎಂದಿದ್ದಾರೆ.
ಸಚಿವ ಸುರೇಶ್​ ಕುಮಾರ್ ಅವರು ಇತ್ತೀಚೆಗೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಕಾರ್ಯನಿಮಿತ್ತ ಭೇಟಿ ಕೊಡುತ್ತಲೇ ಇದ್ದಾರೆ. ಎರಡು ದಿನಗಳ ಹಿಂದಷ್ಟೇ ಚಾಮರಾಜನಗರದ ಹನೂರು ತಾಲೂಕಿಗೆ ಭೇಟಿ ನೀಡಿದ್ದರು. ಮೆದಗಲಾಣೆ, ಇಂಡಿಗನತ್ತ, ತೊಳಸಿನಕೆರೆ ಗ್ರಾಮಗಳಿಗೆ ತೆರಳಿ, ಗ್ರಾಮಸ್ಥರೊಂದಿಗೆ ಸಭೆ ನಡೆಸಿದ್ದರು. ರಸ್ತೆ, ಕುಡಿಯುವ ನೀರು, ವಿದ್ಯುತ್​ ಸಂಪರ್ಕ, ಜಾನುವಾರು ಮೇವು ಸೇರಿ ಹಲವು ವಿಚಾರಗಳ ಬಗ್ಗೆ ಹಳ್ಳಿಗರು ಸಚಿವರಿಗೆ ಅಹವಾಲು ಸಲ್ಲಿಸಿದ್ದರು. ಕಳೆದ ವಾರದಿಂದಲೂ ಬೀದರ್​, ಮುದ್ದೇನಹಳ್ಳಿ ಸೇರಿ ಕೆಲವೆಡೆ ಪ್ರವಾಸ ಮಾಡುತ್ತಲೇ ಇದ್ದಾರೆ.
ಇದೆಂಥಾ ದುರ್ವಿಧಿ: ಇತ್ತ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ, ಅತ್ತ ಶವವಾಗಿ ಮನೆಗೆ ಮರಳಿದ ಪತಿ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + sixteen =
Remember me
