ಬೆಂಗಳೂರು: ಕರ್ತವ್ಯ ನಿರ್ವಹಣೆ ವೇಳೆ ಕರೊನಾಗೆ ತುತ್ತಾಗಿ ಮೃತಪಟ್ಟಿರುವ ಸಾರಿಗೆ ನೌಕರರ ಕುಟುಂಬಗಳಿಗೂ ತಲಾ 30 ಲಕ್ಷ ರೂ. ವಿಮೆ ಪರಿಹಾರ ನೀಡುವಂತೆ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕರೊನಾ ವಾರಿಯರ್‌ಗಳಾಗಿ ಕೆಲಸ ಮಾಡುವಾಗ ಸೋಂಕಿಗೆ ತುತ್ತಾಗಿ ಮೃತಪಡುವ ಸರ್ಕಾರಿ ನೌಕರರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ವಿಮೆ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ೋಷಿಸಿದೆ. ಅದು ಸಾರಿಗೆ ನಿಗಮಗಳ ನೌಕರರ ಕುಟುಂಬದವರಿಗೆ ದೊರೆತಿಲ್ಲ. ಈವರೆಗೆ ನಾಲ್ಕೂ ನಿಗಮಗಳಿಂದ 40ಕ್ಕೂ ಹೆಚ್ಚು ನೌಕರರು ಕರೊನಾಗೆ ಬಲಿಯಾಗಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ನಿಗಮಗಳಿಂದ ಯಾವುದೇ ಆದೇಶ ಹೊರಬಿದ್ದಿಲ್ಲ. ಈಗಲಾದರೂ ಈ ಕುರಿತಾಗಿ ಆದೇಶ ಹೊರಡಿಸಬೇಕು ಎಂದು ನೌಕರರು ಆಗ್ರಹಿಸಿದ್ದಾರೆ.
ಸಾರಿಗೆ ನೌಕರರು ಸೋಂಕಿನಿಂದ ಮೃತಪಟ್ಟರೆ ಸರ್ಕಾರಿ ನೌಕರರಿಗೆ ನೀಡಲಾಗುವ ವಿಮೆ ವ್ಯಾಪ್ತಿಗೆ ತರುವುದಾಗಿ ಡಿಸಿಎಂ ಲಕ್ಷ್ಮಣ ಸವದಿ ೋಷಿಸಿದ್ದರು. ಆದರೆ ನಿಗಮಗಳ ಆಧಿಕಾರಿಗಳು ಈ ಕುರಿತು ಸರಿಯಾಗಿ ಸ್ಪಂದಿಸುತ್ತಿಲ್ಲ. ಕರೊನಾಗೆ ಬಲಿಯಾದ ನೌಕರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿರುವುದರಿಂದ ಸರ್ಕಾರ ತಕ್ಷಣ ನೆರವಾಗಬೇಕು ಎಂದು ರಾಜ್ಯ ರಸ್ತೆ ನೌಕರರ ೆಡರೇಷನ್ (ಸಿಐಟಿಯು) ಜಂಟಿ ಕಾರ್ಯದರ್ಶಿ ಆನಂದ್ ಒತ್ತಾಯಿಸಿದ್ದಾರೆ.
ಸಾರಿಗೆ ನೌಕರರನ್ನು ವಿಮೆ ವ್ಯಾಪ್ತಿಗೆ ತರುವಂತೆ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಈಗಾಗಲೇ ಎರಡು ಬಾರಿ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆದರೆ, ಇಲಾಖೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕರೊನಾದಿಂದ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಮೃತ ನೌಕರರಿಗೆ ಪರಿಹಾರ ನೀಡುವುದರ ಬಗ್ಗ ಸರ್ಕಾರವೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕೆಎಸ್ಸಾರ್ಟಿಸಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಲ್ಕು ಸಾರಿಗೆ ನಿಗಮಗಳ ಪೈಕಿ ಬಿಎಂಟಿಸಿಯಲ್ಲಿ 900, ಕೆಎಸ್ಸಾರ್ಟಿಸಿಯಲ್ಲಿ 1 ಸಾವಿರ, ವಾಯುವ್ಯ ಸಾರಿಗೆ ನಿಗಮದಲ್ಲಿ 700, ಹಾಗೂ ಈಶಾನ್ಯ ಸಾರಿಗೆ ನಿಗಮದಲ್ಲಿ 1 ಸಾವಿರ ಸೇರಿ ಒಟ್ಟು 3,500ಕ್ಕೂ ಅಧಿಕ ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಈ ನಾಲ್ಕು ನಿಗಮಗಳಲ್ಲಿ 40ಕ್ಕೂ ಹೆಚ್ಚಿನ ನೌಕರರು ಸೋಂಕಿಗೆ ಬಲಿಯಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
