ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೊಮ್ಮೆ ಕರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿ ನೆಗೆಟಿವ್​ ಬಂದಿದೆ.
ಸಿಎಂ ಇದುವರೆಗೂ 5-6 ಬಾರಿ ಕರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಎಲ್ಲ ವರದಿಗಳೂ ನೆಗೆಟಿವ್ ಬಂದಿವೆ. ಸದ್ಯ ಸಿಎಂ ಸೇರಿದಂತೆ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಶನಿವಾರ ಬೆಳಗ್ಗೆ ಸಿಬ್ಬಂದಿ ನೆರವಿನಿಂದ ಗೃಹ ಕಚೇರಿ ಕೃಷ್ಣಾ, ಕಾವೇರಿ ಹಾಗೂ ಧವಳಗಿರಿ ನಿವಾಸಗಳಿಗೆ ಸೋಂಕು ನಿವಾರಕ ಸಿಂಪಡಿಸಿದ್ದಾರೆ.
ಇದನ್ನೂ ಓದಿರಿಕೋವಿಡ್​ಗೆ ಅಪ್ಪ-ಮಗ ಬಲಿ, ಇಡೀ ಕುಟುಂಬಕ್ಕೆ ಸೋಂಕು
ಜು.7ರಂದು ಸಿಎಂ ಗೃಹ ಕಚೇರಿ ಕೃಷ್ಣಾ, ಖಾಸಗಿ ನಿವಾಸ ಧವಳಗಿರಿಯಲ್ಲಿ ಒಟ್ಟು 7 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದರಿಂದ ಬಿ.ಎಸ್​. ಯಡಿಯೂರಪ್ಪ ಅವರು ಹೋಂ ಕ್ವಾರಂಟೈನ್​ಗೆ ಒಳಪಟ್ಟಿದ್ದರು. ಗೃಹ ಕಚೇರಿ ಬದಲು ತಮ್ಮ ನಿವಾಸದಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲಿಂದಲೇ ವಿಡಿಯೋ ಕಾನ್ಫರೆನ್ಸ್ ‌ಮುಖಾಂತರ ಅಧಿಕಾರಿಗಳು ಮತ್ತು ಸಚಿವರಿಗೆ ಅಗತ್ಯ ಸಲಹೆ ನೀಡುತ್ತಿದ್ದರು. ಇದೀಗ ಮತ್ತೊಮ್ಮೆ ಮಾಡಿಸಿಕೊಂಡ ಕೊರನಾ ಪರೀಕ್ಷೆಯಲ್ಲೂ ವರದಿ ನೆಗೆಟಿವ್​ ಬಂದಿದ್ದು, ಸಿಎಂ ನಿರಾಳರಾಗಿದ್ದಾರೆ.
video/ ‘ರಮ್’ ಕುಡಿದ್ರೆ ಕರೊನಾ ಬರಲ್ಲ; ಕೌನ್ಸಿಲರ್ ರವಿಚಂದ್ರ ಗಟ್ಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 9 =
Remember me
