ಚಿಕ್ಕಮಗಳೂರು:ನಗರದ ಕ್ವಾರಂಟೈನ್‌ನಲ್ಲಿದ್ದ ಕರೊನಾ ನೆಗೆಟಿವ್ ವ್ಯಕ್ತಿಯೊಬ್ಬರು ಆಸ್ಪತ್ರೆಯ ಶೌಚಗೃಹದಲ್ಲಿ ನೇಣುಬಿಗಿದುಕೊಂಡು ಮೃತಪಟ್ಟಿದ್ದಾರೆ.
ಕರೊನಾ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಈ ವ್ಯಕ್ತಿಗೆ ಮೇ 19ರಂದು ಕೊಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಮಾದರಿ ಸಂಗ್ರಹಿಸಿ ಚಿಕ್ಕಮಗಳೂರಿನ ಕೆ.ಎಸ್​.ಒ. ಕಟ್ಟಡದಲ್ಲಿರುವ ಕೋವಿಡ್​ ಕೇರ್​ ಸೆಂಟರ್​ಗೆ ವರ್ಗಾವಣೆ ಮಾಡಲಾಗಿತ್ತು. ನಂತರ ಮೂಲವ್ಯಾಧಿಯಿಂದ ಬಳಲುತ್ತಿದ್ದ ಇವರನ್ನು ಎಂ.ಸಿ.ಎಚ್​. ಬ್ಲಾಕ್​ನಲ್ಲಿರುವ ಐಸೋಲೇಷನ್​ ವಾಡ್​ರ್ಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ಬಾನುವಾರ ಬೆಳಗ್ಗೆ ರೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿರಿಕ್ವಾರಂಟೈನಲ್ಲಿದ್ದ ಲಾಡ್ಜ್​ನಲ್ಲೇ ಆ್ಯನಿವರ್ಸರಿ ಸೆಲೆಬ್ರೇಷನ್.. ಆ ನ್ವಾಲ್ವರ ವಿರುದ್ಧ ಕೇಸ್​!
ಬೆಳಗ್ಗೆ 8.30ರ ಸುಮಾರಿನಲ್ಲಿ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದ ರೋಗಿ, ಬೆಳಗ್ಗೆ 9ಕ್ಕೆ ನಡೆಯುವ ದೈನಂದಿನ ತಪಾಸಣೆ ವೇಳೆ ಶೌಚಗೃಹದಲ್ಲಿದ್ದರು. ತಪಾಸಣೆಗೆ ಹಾಜರಾಗಲಿಲ್ಲ. 30 ನಿಮಿಷಗಳ ಬಳಿಕ ಕರ್ತವ್ಯ ನಿರತ ವೈದ್ಯರು ರೋಗಿಯನ್ನು ತಪಾಸಣೆ ಮಾಡಲು ಹುಡುಕಿದಾಗ ಶೌಚಗೃಹದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದರು ಎಂದು ಜಿಲ್ಲಾ ಆಸ್ಪತ್ರೆಯ ಸರ್ಜನ್​ ತಿಳಿಸಿದ್ದಾರೆ.
ಮೃತ ವ್ಯಕ್ತಿಗೆ ಕೋವಿಡ್​19 ಪರೀಕ್ಷಾ ವರದಿ ನೆಗೆಟಿವ್​ ಬಂದಿದ್ದು, ಮೂಲವ್ಯಾಧಿ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಇರಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ವಿವರಿಸಿದ್ದಾರೆ.
ಇದನ್ನೂ ಓದಿರಿಹೆದ್ದಾರಿ ಬಿಕೋ ಎನ್ನುತ್ತಿದ್ದರೂ ಹಾಲಿನ ಕ್ಯಾಂಟರ್​ ರೂಪದಲ್ಲಿ ಬಂದ ಜವರಾಯ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
