ಬೆಂಗಳೂರು:ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರೊನಾ ಸೋಂಕಿತನೊಬ್ಬ ಸೆಕ್ಯೂರಿಟಿಗಳಿಗೆ ಉಗಿದು ಪರಾರಿಯಾಗಿದ್ದಾನೆ.
ಆಸ್ಪತ್ರೆಯಿಂದ ಓಡಿಹೋಗುತ್ತಿದ್ದ ಸೋಂಕಿತನನ್ನು ತಡೆಯಲು ಹೋದ ಸೆಕ್ಯೂರಿಟಿ ಮೇಲೆಯೇ ಆತ ಉಗಿದಿದ್ದಾನೆ. ಸ್ಥಳದಲ್ಲಿದ್ದ ಪೊಲೀಸ್​ ಸಿಬ್ಬಂದಿ ಮತ್ತು ಸೆಕ್ಯೂರಿಟಿಯನ್ನು ನೂಕಿ ಪರಾರಿಯಾಗಿದ್ದು, ಎಲ್ಲರಿಗೂ ದೊಡ್ಡ ತಲೆನೋವು ತಂದೊಡ್ಡಿದ್ದಾನೆ.ಇದನ್ನೂ ಓದಿರಿಪಿಪಿಇ ಕಿಟ್​ ಧರಿಸದೆ ಕೋವಿಡ್​ ಸೋಂಕಿತನ ಅಂತ್ಯಸಂಸ್ಕಾರ ನೆರವೇರಿಸಿದ ಶಾಸಕ!
ಐಸೋಲೇಷನ್​ ವಾರ್ಡ್​ನಲ್ಲಿ ಟ್ರೀಟ್​ಮೆಂಟ್​ ಪಡೆಯುತ್ತಿದ್ದ ಕರೊನಾ ಸೋಂಕಿತ ಇಂದು ಏಕಾಏಕಿ ಎಸ್ಕೇಪ್​ ಆಗಿರುವುದು ಆರೋಗ್ಯಾಧಿಕಾರಿಗಳಿಗೆ ಟೆನ್ಷನ್​ ತಂದೊಡ್ಡಿದೆ. ಸೋಂಕಿತನು ವಾಣಿವಿಲಾಸ್​ ಆಸ್ಪತ್ರೆ ಮೂಲಕ ಹಾದುಹೋಗಿದ್ದು, ಇಲ್ಲೂ ಆತಂಕದ ಕಾರ್ಮೋಡ ಕವಿದಿದೆ.
ಆಸ್ಪತ್ರೆಯಿಂದ ಎಸ್ಕೇಪ್​ ಆದ ವ್ಯಕ್ತಿ ನಿನ್ನೆ ಸಂಜೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ಇಂದು ಕಾಂಪೌಡ್​ ಹಾರಿಕೊಂಡು ಹೋಗಿದ್ದಾನೆ. ಅಧಿಕಾರಿಗಳು ಈತನ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಕರೊನಾ ಸೋಂಕಿತ ಎಸ್ಕೇಪ್​ ಆಗಿರುವುದು ನಿಜ ಎಂದು ವಿಕ್ಟೋರಿಯಾ ಆಸ್ಪತ್ರೆ ಡೀನ್ ಡಾ. ಜಯಂತಿ ತಿಳಿಸಿದ್ದಾರೆ.
ಡಿಸಿ ಕಚೇರಿ ಎದುರಲ್ಲೇ ಜಿಪಂ ಸದಸ್ಯನನ್ನು ಕೊಚ್ಚಿದ ದುಷ್ಕರ್ಮಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 4 =
Remember me
