ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪಗೆ ಕರೊನಾ ಪಾಸಿಟಿವ್​ ಬಂದ ಬೆನ್ನಲ್ಲೇ ಅವರ ನಿವಾಸದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕ ಮನೆ ಮಾಡಿದೆ.
ಸಿಎಂಗೆ ಸೋಂಕು ಇರುವುದು ಗೊತ್ತಾಗುತ್ತಿದ್ದಂತೆ ಅವರ ಪುತ್ರಿ ಪದ್ಮಾವತಿಗೂ ಕರೊನಾ ಖಚಿತವಾಗಿದ್ದು, ಅವರಿಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಪುತ್ರ ವಿಜಯೇಂದ್ರಗೆ ವರದಿ ನೆಗೆಟಿವ್ ಬಂದಿದೆಯಾದರೂ ಸದ್ಯ ಹೋಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ. ಆದರೆ, ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮತ್ತೆ 6 ಸಿಬ್ಬಂದಿಗೆ ಪಾಸಿಟಿವ್ ಬಂದಿದ್ದು, ಒಟ್ಟಾರೆ ಸಿಎಂ ನಿವಾಸಗಳ 11 ಮಂದಿಗೆ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಗೊತ್ತಾಗಿದೆ.
ಇದನ್ನೂ ಓದಿರಿಯಡಿಯೂರಪ್ಪನವರ ಆರೋಗ್ಯ ಸ್ಥಿರ- ಚಿಕಿತ್ಸೆಗೆ ಸ್ಪಂದನೆ ಎಂದ ವೈದ್ಯರು
ಮೂರು ದಿನಗಳ ಹಿಂದಷ್ಟೇ ರಾಜ್ಯಪಾಲರನ್ನು ಸಿಎಂ ಭೇಟಿ ಮಾಡಿದ್ದರು. ಇದೀಗ ರಾಜಭವನದ ಸಿಬ್ಬಂದಿಯಲ್ಲೂ ಆತಂಕ ಮನೆ ಮಾಡಿದೆ. ಅಲ್ಲದೆ ಸಿಎಂ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಸೆಲ್ಫ್ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.
ಜು.30ರಂದು ಶಿವಾಜಿನಗರದಲ್ಲಿ ಮೆಟ್ರೋ ಸುರಂಗ ಕಾಮಗಾರಿಗೆ ಸಿಎಂ ಚಾಲನೆ ನೀಡಿದ್ದರು. ಕೆಲ ಸಚಿವರೂ ಉಪಸ್ಥಿತರಿದ್ದರು. ಅವರೆಲ್ಲರಿಗೂ ಕರೊನಾ ಭೀತಿಯ ಛಾಯೆ ಆವರಿಸಿದೆ. ಈಗಾಗಲೇ ಸಿಎಂ ಕುಟುಂಬ ಕ್ವಾರಂಟೈನ್​ಗೆ ಒಳಪಟ್ಟಿದ್ದು, ಸಿಎಂ ನಿವಾಸ ಕಾವೇರಿ-ಕೃಷ್ಣಾದಲ್ಲಿ ಎಲ್ಲ ಸಿಬ್ಬಂದಿಗೂ ತಪಾಸಣೆ ಮಾಡಲಾಗುತ್ತಿದೆ.
ನಾನು ಯಾವ ಹುದ್ದೆಗೂ ಆಸೆ ಪಟ್ಟಿಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:4 × five =
Remember me
