ಬೆಂಗಳೂರು:ಉಪ ಮುಖ್ಯಮಂತ್ರಿ ಡಾ. ಸಿ.ಎನ್​. ಅಶ್ವಥ್ ನಾರಾಯಣ್​ ಅವರಿಗೂ ಕರೊನಾ ಸೋಂಕು ದೃಢಪಟ್ಟಿದೆ. ಅಧಿವೇಶ ಆರಂಭಕ್ಕೂ ಮುನ್ನವೇ ಕೋವಿಡ್​ ಸೋಂಕಿಕ ಜನಪ್ರತಿನಿಧಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ಬಾರಿಯ ಅಧಿವೇಶನದಲ್ಲಿ ಬಹುತೇಕರು ಭಾಗವಹಿಸುವುದು ಅನುಮಾನ.
ಸೆ.16ರಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕರೊನಾ ಸೋಂಕು ತುಗುಲಿದ್ದು, ಸದ್ಯ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದೀಗ ಡಿಸಿಎಂಗೂ ಕೋವಿಡ್​ ಪಾಸಿಟಿವ್​ ಬಂದಿದೆ. ಈ ಬಗ್ಗೆ ಸ್ವತಃ ಅಶ್ವಥ್​ ನಾರಾಯಣ್​ ಅವರೇ ಟ್ವಿಟರ್​ನಲ್ಲಿ ದೃಢಪಡಿಸಿದ್ದಾರೆ.ಇದನ್ನೂ ಓದಿರಿಗೃಹ ಸಚಿವ ಬಸವರಾಜ್​ ಬೊಮ್ಮಾಯಿಗೆ ಕರೊನಾ ಸೋಂಕು
‘ಸೋಮವಾರದಿಂದ ವಿಧಾನಸಭೆಯ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಕೋವಿಡ್​ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಕರೊನಾ ಪಾಸಿಟಿವ್​ ಬಂದಿದೆ. ಆದರೆ, ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ಆರೋಗ್ಯವಾಗಿದ್ದೆ. ವರದಿ ಪಾಸಿಟಿವ್​ ಇರುವ ಕಾರಣ ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ’ ಎಂದು ಡಿಸಿಎಂ ತಿಳಿಸಿದ್ದಾರೆ. ಅಲ್ಲದೆ ‘ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.
ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.
1/2
— Dr. Ashwathnarayan C. N. (@drashwathcn)September 19, 2020

ಜಿಲ್ಲಾಡಳಿತದ ವಿರುದ್ಧ ಶಾಸಕಿ ಆಕ್ರೋಶ, ಏಕಾಂಗಿಯಾಗಿ ಹೋರಾಟ!

‘ಮುಂದಿನ ದಿನಗಳಲ್ಲಿ ಬಿ.ವೈ.ವಿಜಯೇಂದ್ರ ಅವರೇ ರಾಜ್ಯದ ಮುಖ್ಯಮಂತ್ರಿ…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 17 =
Remember me
