ಬೆಂಗಳೂರು:ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಗೆ ಕರೊನಾ ಪಾಸಿಟಿವ್ ದೃಢಪಟ್ಟಿದೆ.
ಇತ್ತೀಚೆಗೆ ಒಂದೇ ವಾರದಲ್ಲಿ ಎರಡು ಬಾರಿ ಕರೊನಾ ಪರೀಕ್ಷೆಗೆ ಒಳಗಾಗಿದ್ದ ಸಿ.ಟಿ. ರವಿ ಅವರಿಗೆ ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್ ಬಂದಿತ್ತು. ಹಾಗಾಗಿ ಶನಿವಾರ 3ನೇ ಟೆಸ್ಟ್ ಮಾಡಿಸಿದ್ದರು. ಈ ಬಗ್ಗೆ ನಿನ್ನೆ(ಭಾನುವಾರ) ಟ್ವಿಟರ್​ನಲ್ಲಿ ಹೇಳಿಕೊಂಡಿದ್ದ ಸಚಿವರು, ‘ಥರ್ಡ್ ಅಂಪೈರ್ ರಿಸಲ್ಟ್‌ಗಾಗಿ ಕಾಯುತ್ತಿದ್ದೇನೆ’ ಎಂದಿದ್ದರು. ಭಾನುವಾರ ಸಂಜೆ ವರದಿ ಬಂದಿದ್ದು, ಪತ್ನಿ ಪಲ್ಲವಿ, ಗನ್ ಮ್ಯಾನ್ ಮತ್ತು ಕಾರಿನ ಚಾಲಕ ಸೇರಿ ಕಚೇರಿ ಸಿಬ್ಬಂದಿಗೆ ನೆಗೆಟಿವ್ ಬಂದಿದೆ. ಆದರೆ, ಸಿ.ಟಿ.ರವಿ ಅವರಿಗೆ ಕರೊನಾ ಪಾಸಿಟಿವ್ ಬಂದಿದೆ.ಇದನ್ನೂ ಓದಿರಿಸಚಿವ ಶ್ರೀರಾಮುಲು ಆಪ್ತ ಪಕ್ಷದಿಂದ ಅಮಾನತು
ಈ ಬಗ್ಗೆ ಇಂದು ಟ್ವೀಟ್​ ಮಾಡಿರುವ ಸಿ.ಟಿ.ರವಿ, “ನಿನ್ನೆ ನಾನು, ಮಡದಿ ಪಲ್ಲವಿ, ನನ್ನ ಸಿಬ್ಬಂದಿ ವರ್ಗ ಕೋವಿಡ್ 19 ಪರೀಕ್ಷೆಗೆ ಒಳಪಟ್ಟಿದ್ದೆವು. ಪಲ್ಲವಿ ಹಾಗೂ ನನ್ನ ಗನ್-ಮ್ಯಾನ್, ಚಾಲಕ ಸೇರಿ ಆಫೀಸ್ ಸಿಬ್ಬಂದಿ ಎಲ್ಲರದ್ದು ನೆಗೆಟಿವ್ ಬಂದಿದೆ. ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ” ಎಂದು ಹೇಳಿಕೊಂಡಿದ್ದಾರೆ.
ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸುಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ.
— C T Ravi 🇮🇳 ಸಿ ಟಿ ರವಿ (@CTRavi_BJP)July 13, 2020

”ಆದರೆ, ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತ ನಾನು ಇಲ್ಲಿಂದಲೇ ಕೆಲಸ ಮುಂದುವರಿಸಲಿದ್ದು, ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ” ಎಂದು ಸಚಿವರು ಹೇಳಿದ್ದಾರೆ.
ಇಡೀ ರಾಜ್ಯ ಲಾಕ್​ಡೌನ್​?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − fifteen =
Remember me
