ಬೆಂಗಳೂರು:ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನಕ್ಕೆ ಬಂದಿದ್ದವರಲ್ಲಿ ಆತಂಕ ಸೃಷ್ಟಿಸಿದೆ.
ಸದ್ಯ ಶಾಸಕರು ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿರುವ ದಿನೇಶ್​ ಗುಂಡೂರಾವ್​, ‘ನನಗೆ ಕೋವಿಡ್​ ರೋಗಲಕ್ಷಣ ಇಲ್ಲರಲ್ಲ. ಆದರೆ ಕೋವಿಡ್ ಟೆಸ್ಟ್​ನ ವರದಿ ಪಾಸಿಟಿವ್​ ಬಂದಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಕೋವಿಡ್​ ಟೆಸ್ಟ್ ಮಾಡಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.ಇದನ್ನೂ ಓದಿರಿಉಮಾ ಭಾರತಿಗೆ ಕರೊನಾ ಪಾಸಿಟಿವ್: ಟ್ವೀಟರ್​ನಲ್ಲಿ ಮಾಹಿತಿ
ದಿನೇಶ್ ಗುಂಡೂರಾವ್​ ಅವರು ಶನಿವಾರ ಸದನಕ್ಕೆ ಹಾಜರಾಗಿದ್ದರು, ಹಾಗಾಗಿ ಸಹಜವಾಗಿಯೇ ಇವರ ಸಂಪರ್ಕಕ್ಕೆ ಬಂದವರಲ್ಲಿ ಕರೊನಾ ಭೀತಿ ಆವರಿಸಿದೆ.
ಕೋವಿಡ್ ಟೆಸ್ಟ್ ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ.
ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ.
ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao)September 27, 2020

ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕರೊನಾ ಸೋಂಕಿನ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕ್ಷಣಕ್ಷಣಕ್ಕೂ ಆತಂಕ ಸೃಷ್ಟಿಸುತ್ತಿದೆ. ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಸಾವು-ನೋವನ್ನು ತಂದೊಡ್ಡಿದೆ.
ನಟ ಶರಣ್​ ಆಸ್ಪತ್ರೆಗೆ ದಾಖಲು, ಅಣ್ಣನ ಆರೋಗ್ಯದ ಬಗ್ಗೆ ತಂಗಿ ಶ್ರುತಿ ಹೇಳಿದ್ದೇನು?

ಮೈಸೂರಲ್ಲಿ ನಕಲಿ ಡಾಕ್ಟರೇಟ್ ದಂಧೆ, ಶಾಸಕನ ಗೌರವ ಡಾಕ್ಟರೇಟ್ ತಡೆದ ಡಿಸಿಪಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
