ಶಿವಮೊಗ್ಗ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮನೆ ಮೇಲೂ ಕರೊನಾ ಕಾರ್ಮೋಡ ಕವಿದಿದೆ.
ಈಶ್ವರಪ್ಪರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ. ನಾಲ್ಕು ದಿನಗಳಿಂದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ಸಿಬ್ಬಂದಿಗೆ ಕರೊನಾ ಪರೀಕ್ಷೆ ಮಾಡಿಸಲಾಗಿದ್ದು, ನಿನ್ನೆ ಬಂದ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಇದನ್ನೂ ಓದಿರಿಥರ್ಡ್ ಅಂಪೈರ್ ಫಲಿತಾಂಶದಲ್ಲಿ ಸಿ.ಟಿ.ರವಿಗೆ ಕೋವಿಡ್ ಪಾಸಿಟಿವ್
ಈಶ್ವರಪ್ಪರ ಮನೆಯಲ್ಲಿ ಕೆಲಸಗಾರನಿಗೆ ಕರೊನಾ ಪಾಸಿಟಿವ್​ ಬರುತ್ತಿದ್ದಂತೆ ಮನೆಯ ಸದಸ್ಯರಿಗೆ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ವರದಿ ಇನ್ನಷ್ಟೇ ಬರಬೇಕಿದೆ.
ಈ ಪೈಕಿ ಈಶ್ವರಪ್ಪ ಅವರು ಕರೊನಾ ಪರೀಕ್ಷೆಗೆ ಒಳಪಟ್ಟಿದ್ದಾರೆಯೇ ಎಂಬುದು ಇನ್ನಷ್ಟೆ ತಿಳಿಯಬೇಕಿದೆ. ಅಲ್ಲದೆ ಈ ಮೊದಲೇ ನಿಗದಿಯಾಗಿದ್ದ ಈಶ್ವರಪ್ಪರ ಸುದ್ದಿಗೋಷ್ಠಿ ಕಡೇ ಕ್ಷಣದಲ್ಲಿ ರದ್ದಾಗಿದೆ. ಇಂದು ಬೆಳಗ್ಗೆ 10.30ಕ್ಕೆ ಸಚಿವರು ಸುದ್ದಿಗೋಷ್ಠಿ ನಡೆಸಬೇಕಿತ್ತು. ಇತ್ತೀಚಿಗಷ್ಟೇ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಗೂ ಕರೊನಾ ಪಾಸಿಟಿವ್​ ಬಂದಿದೆ.
ಅಫಜಲಪುರ ತಾಪಂ ಅಧ್ಯಕ್ಷೆಯನ್ನೇ ವರಿಸಿದ ​ಉಪಾಧ್ಯಕ್ಷ, ಇನ್ಮುಂದೆ ಪತಿ-ಪತ್ನಿ ದರ್ಬಾರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
