ಧಾರವಾಡ:ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೂ ಕರೊನಾ ಸೋಂಕು ದೃಢಪಟ್ಟಿದ್ದು, ರೋಗ ಲಕ್ಷಣಗಳಿಲ್ಲದ ಕಾರಣ ಹೋಂ ಐಸೋಲೇಷನ್‌ಗೆ ಒಳಗಾಗಿದ್ದಾರೆ.
ಕರೊನಾ ತಗುಲಿರುವ ಬಗ್ಗೆ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ವಿನಯ್​ ಕುಲಕರ್ಣಿ, ‘ಕ್ಷೇತ್ರದ ಅಭಿವೃದ್ಧಿ ಕಾರ್ಯ ಮತ್ತು ಕರೊನಾ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ತೊಡಗಿದ್ದೆ. ಹಾಗಾಗಿ ಸೋಂಕು ತಗುಲಿರುವ ಶಂಕೆ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದೆ. ವರದಿಯು ಪಾಸಿಟಿವ್ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೈನ್​ಗೆ ಒಳಪಟ್ಟಿದ್ದೇನೆ’ ಎಂದು ವಿವರಿಸಿದ್ದಾರೆ.
ಇದನ್ನೂ ಓದಿರಿಪದವಿ ಕಾಲೇಜು ತರಗತಿಗಳ ಆರಂಭಕ್ಕೆ ಡೇಟ್​ಫಿಕ್ಸ್, ಇಲ್ಲಿದೆ ಡಿಟೇಲ್ಸ್
‘ಆತಂಕಕ್ಕೆ ಕಾರಣ ಇಲ್ಲ, ನಾಡಿನ ಹಾಗೂ ಕ್ಷೇತ್ರದ ಜನರ ಪ್ರೀತಿ ಆಶೀರ್ವಾದದಿಂದ ಬೇಗ ಗುಣಮುಖನಾಗಿ ನಿಮ್ಮ ಸೇವೆಗೆ ಮರಳುತ್ತೇನೆ’ ಎಂದಿರುವ ವಿನಯ್​ ಕುಲಕರ್ಣಿ, ‘ಕಳೆದ ಕೆಲ ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದಿದ್ದಾರೆ.
ಇತ್ತೀಚೆಗಷ್ಟೇ ಮೇಕೆ ಖರೀದಿಸಲೆಂದು ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರು ಧಾರವಾಡದಲ್ಲಿರುವ ವಿನಯ್​ ಕುಲಕರ್ಣಿ ಅವರ ಫಾರ್ಮ್ ಹೌಸ್​ಗೆ ಭೇಟಿ ನೀಡಿದ್ದರು. ಈ ವೇಳೆ ನೂರಾರು ಅಭಿಮಾನಿಗಳು ಉಪಸ್ಥಿತರಿದ್ದರು. ಇದೀಗ ಅವರಿಗೂ ಕರೊನಾ ಸೋಂಕಿನ ಭೀತಿ ಆವರಿಸಿದೆ.
ಕನ್ನಡ ಕಿರುತೆರೆ ನಟಿಗೆ ವರದಕ್ಷಿಣೆ ಕಿರುಕುಳ, ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ

ಕೋಲುಮಂಡೆ ವಿವಾದ: ರ‍್ಯಾಪರ್​ ಚಂದನ್ ಶೆಟ್ಟಿ ವಿರುದ್ಧ ದೂರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
