ಬೆಂಗಳೂರು:ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್​ ಅವರ ಆಪ್ತಸಹಾಯಕರೊಬ್ಬರಿಗೆ ಕರೊನಾ ಪಾಸಿಟಿವ್​ ದೃಢಪಟ್ಟಿದೆ.
ಈಗಾಗಲೇ ವಿಧಾನಸೌಧದ ಸುಧಾಕರ್ ಅವರ ಕಚೇರಿ 339 ಕೊಠಡಿಯನ್ನು ಸೀಲ್‍ಡೌನ್ ಮಾಡಲಾಗಿದೆ. ಆಪ್ತ ಸಿಬ್ಬಂದಿ ಶಾಖೆ ಇದ್ದ 339-ಎ ಕೊಠಡಿಯನ್ನೂ ಸೀಲ್‍ಡೌನ್ ಮಾಡಲಾಗಿದೆ.
ಇದನ್ನೂ ಓದಿರಿರಾತ್ರಿಯಿಡೀ ಪರದಾಡಿದ ನಟಿ ಸುಧಾರಾಣಿ, ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ; ಡಾ.ಕೆ. ಸುಧಾಕರ್
ಸಚಿವರ ಆಪ್ತ ಸಹಾಯಕರಿಗೆ ಕರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಸುಧಾಕರ್​ಗೂ ಕರೊನಾ ಭೀತಿ ಆವರಿಸಿದೆ ಎಂಬ ಸುದ್ದಿ ಹಬ್ಬಿತ್ತು. ಈ ಸಂಬಂಧ ಟ್ವೀಟ್​ ಮಾಡಿರುವ ಸಚಿವರು, ”ಆಪ್ತ ಸಹಾಯಕನಿಗೆ ಕರೊನಾ ಸೋಂಕು ತಗುಲಿದ್ದು ಮತ್ತೊಮ್ಮೆ ನಾನು ಕ್ವಾರಂಟೈನ್ ಆಗಬೇಕಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಗಮನಿಸಿದ್ದೇನೆ. ನಾನು ಸೋಂಕಿತನ ಪ್ರಾಥಮಿಕ ಸಂಪರ್ಕ ಹೊಂದಿಲ್ಲ. ಹೀಗಾಗಿ ಕ್ವಾರಂಟೈನ್ ಆಗುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ.
ಆಪ್ತ ಸಹಾಯಕನಿಗೆ ಕೊರೋನಾ ಸೋಂಕು ತಗುಲಿದ್ದು ಮತ್ತೊಮ್ಮೆ ನಾನು ಕ್ವಾರಂಟೈನ್ ಆಗಬೇಕಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಗಮನಿಸಿದ್ದೇನೆ. ನಾನು ಸೋಂಕಿತನ ಪ್ರಾಥಮಿಕ ಸಂಪರ್ಕ ಹೊಂದಿಲ್ಲ. ಹೀಗಾಗಿ ಕ್ವಾರಂಟೈನ್ ಆಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ
— Dr Sudhakar K (@mla_sudhakar)July 28, 2020

ಕೆಲ ದಿನಗಳ ಹಿಂದೆ ಸಚಿವ ಸುಧಾಕರ್​ರ ತಂದೆ, ಮತ್ನಿ, ಮಗಳಿಗೂ ಕರೊನಾ ಸೋಂಕು ಕಾಣಿಸಿಕೊಂಡಿತ್ತು. ಆ ವೇಳೆ ಸಚಿವರು ಹೋಂ ಕ್ವಾರಂಟೈನ್​ಗೆ ಒಳಪಟ್ಟಿದ್ದರು.
ಸುದ್ದಿಗಾಗಿ ಮೃತ ಪ್ರೇಯಸಿ ಮನೆಗೆ ಬೆಂಕಿ ಹಚ್ಚಿಸಿದ್ದ ವರದಿಗಾರ ಅರೆಸ್ಟ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
