ಬೀದರ್:ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್​ ಶಾಸಕ ಬಿ. ನಾರಾಯಣರಾವ್​ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಕರೊನಾ ಸೋಂಕಿನಿಂದ ಬಳಲುತ್ತಿರುವ ಶಾಸಕರು ಸೆ.1ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶಕ್ಕೆ ಸೋಂಕು, ನ್ಯೂಮೋನಿಯಾ, ಅಧಿಕ ರಕ್ತದೊತ್ತಡ ಹಾಗೂ ಶುಗರ್ ನಿಂದಾಗಿ ಆರಂಭದಲ್ಲಿಯೇ ಅವರ ಆರೋಗ್ಯ ಬಿಗಡಾಯಿಸಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾದ ಎರಡನೇ ದಿನದಂದೇ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿತ್ತು.ಇದನ್ನೂ ಓದಿರಿಮಳೆ ತಂದ ಸಂಕಷ್ಟ: ಭೂಮಿಯಲ್ಲೇ ಕೊಳೆಯುತ್ತಿದೆ ಈರುಳ್ಳಿ, ಬೆಳೆಗಾರ ಆತ್ಮಹತ್ಯೆ
ಆಸ್ಪತ್ರೆಗೆ ದಾಖಲಾದ 2 ವಾರದ ಬಳಿಕ ಶಾಸಕರ ಆರೋಗ್ಯದಲ್ಲಿ ಸುಧಾರಣೆ ಕಂಡಿತ್ತು. ವೆಂಟಿಲೇಟರ್ ಕೂಡ ತೆಗೆಯಲಾಗಿತ್ತು. ಆದ್ರೆ ಮಂಗಳವಾರ ರಾತ್ರಿಯಿಂದ ಮತ್ತೆ ಆರೋಗ್ಯ ಹದಗೆಟ್ಟಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸದ ಕಾರಣ ಪರಿಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. 65 ವರ್ಷದ ನಾರಾಯಣರಾವ್​ಗೆ ಆ.31ರಂದು ಕರೊನಾ ಸೋಂಕು ದೃಢಪಟ್ಟಿತ್ತು.
VIDEO|ಶಿರಾ ಬೈ ಎಲೆಕ್ಷನ್​: ಮತ ಕೇಳೋಕೆ ಬಂದ ಮಾಜಿ ಶಾಸಕರಿಗೆ ಹಿಗ್ಗಾಮುಗ್ಗಾ ತರಾಟೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
