ಬೆಳಗಾವಿ:ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕರೊನಾ ಪಾಸಿಟಿವ್ ಬಂದಿದೆ ಎಂದು ಸಚಿವ ಭೈರತಿ ಬಸವರಾಜ್​ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭೈರತಿ ಬಸವರಾಜ್​, ರಮೇಶ್ ಜಾರಕಿಹೊಳಿ‌ ಬೆಂಗಳೂರಿನಲ್ಲೇ ಇದ್ದಾರೆ. ಇನ್ನೆರಡು ದಿನದಲ್ಲಿ ಬೆಳಗಾವಿ ಲೋಕಸಭೆ ಉಪಚುನಾವಣಾ ಪ್ರಚಾರಕ್ಕೆ ಬಾಲಚಂದ್ರ ಜಾರಕಿಹೊಳಿ‌ ಬರ್ತಾರೆ. ರಮೇಶ್​ ಚೇತರಿಕೆ ಬಳಿಕ ಚುನಾವಣಾ ಪ್ರಚಾರಕ್ಕೆ ಬರೋದಾಗಿ ಹೇಳಿದ್ದಾರೆ. ರಮೇಶ್ ಮತ್ತು ಬಾಲಚಂದ್ರ ಜತೆ ನಿನ್ನೆ ಫೋನ್‌ನಲ್ಲಿ ಮಾತನಾಡಿದ್ದೇನೆ ಎಂದರು. ಇತ್ತ ಸಿಡಿ ಕೇಸ್​ನ ಯುವತಿ ನ್ಯಾಯಾಧೀಶರ ಮುಂದೆ ಹಾಜರ್​ ಆಗಿ ಒಂದು ವಾರ ಆಗಿದೆ. ಅಂದಿನಿಂದ ರಮೇಶ್​ ನಾಪತ್ತೆಯಾಗಿದ್ದು, ಅವರು ಎಲ್ಲಿ ಹೋದರು ಎಂಬ ಪ್ರಶ್ನೆ ಸಾರ್ವಜನಿಕವಾಗಿ ಮೂಡಿತ್ತು.
ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರ ಆರೋಪಿಯನ್ನು ರಾಜಮರ್ಯಾದೆಯಲ್ಲಿ ನೆಪಮಾತ್ರದ ವಿಚಾರಣೆ ನಡೆಸಲಾಗಿದೆ. ಈ ಪ್ರಕರಣದಿಂದ ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಟ್ವೀಟ್​ ಮೂಲಕ ಕಿಡಿಕಾರಿದೆ.
ಕೊರಗಜ್ಜನ ಕ್ಷೇತ್ರದಲ್ಲಿ ಮೂತ್ರ ವಿಸರ್ಜಿಸಿದವ ರಕ್ತಕಾರಿ ಸತ್ತ ಬೆನ್ನಲ್ಲೇ ಕೊಂಡಾಣದಲ್ಲಿ ಮತ್ತೊಂದು ಹೀನ ಕೃತ್ಯ ಬಯಲು

ಮನೆ ಪಕ್ಕದಲ್ಲೇ ಕಾದು ಕುಳಿತಿದ್ದ ಜವರಾಯ! ಬಾವಿಗೆ ಹಾರಿ ತಾಯಿ-ಮಗು ಆತ್ಮಹತ್ಯೆ

2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
