ಬೆಂಗಳೂರು:ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಮತ್ತು ಅವರ ಪತ್ನಿ ಪ್ರತಿಭಾ ಶರತ್ ಅವರಿಗೂ ಕರೊನಾ ಸೋಂಕು ತಗುಲಿದೆ.
ಶಾಸಕರಿಗೆ ಮೊನ್ನೆ(ಸೋಮವಾರ) ಮೈಕೈ ನೋವು ಕಾಣಿಸಿಕೊಂಡಿದ್ದು, ಕರೊನಾ ಪರೀಕ್ಷೆಗೆ ಒಳಗಾಗಿದ್ದರು. ಇಂದು ಬಂದ ವರದಿಯಲ್ಲಿ ಪಾಸಿಟಿವ್​ ಬಂದಿದೆ. ಸೋಂಕು ದೃಢಪಡುತ್ತಿದ್ದಂತೆ ಸ್ವತಃ ಶರತ್​ ಬಚ್ಚೇಗೌಡರೇ ಮಾಹಿತಿ ಹಂಚಿಕೊಂಡಿದ್ದಾರೆ. ಅದರ ವಿವರ ಇಲ್ಲಿದೆ.
ಇದನ್ನೂ ಓದಿರಿವಿಭೂತಿ ಹಚ್ಚಿದರೆ ಕರೊನಾ ಬರಲ್ಲ!
‘ಜುಲೈ 6ರಂದು ನನಗೆ ಸ್ವಲ್ಪ ಮೈಕೈ ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದೆ. ಹಾಗಾಗಿ ಕೋವಿಡ್ ಪರೀಕ್ಷೆಗೆ ನಾನು ಮತ್ತು ನನ್ನ ಪತ್ನಿ ಒಳಗಾಗಿದ್ದೆವು. ಇಂದು(ಬುಧವಾರ) ಸಂಜೆ ಇಬ್ಬರಿಗೂ ಕರೊನಾ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆ ಪಡೆದು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ. ಮನೆಯಲ್ಲೇ ಕ್ವಾರಂಟೈನ್​ಗೆ ಒಳಪಟ್ಟಿದ್ದೀವಿ’ ಎಂದು ಶರತ್​ ಬಚ್ಚೇಗೌಡ ಹೇಳಿದ್ದಾರೆ.
‘ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇವೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರ್ಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್​ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ’ ಎಂದು ಶಾಸಕರು ಕೋರಿದ್ದಾರೆ.
ಎಚ್​.ಡಿ. ಕುಮಾರಸ್ವಾಮಿ ಆಪ್ತಸಹಾಯಕನಿಗೆ ಕರೊನಾ ಪಾಸಿಟಿವ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − two =
Remember me
