ಉಡುಪಿ:ಜೂನ್ 25 ಮತ್ತು 27ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಕರೊನಾ ಪಾಸಿಟಿವ್​ ದೃಢಪಟ್ಟಿದೆ.
ಕಾಪು ತಾಲೂಕು ವ್ಯಾಪ್ತಿಯೊಂದರ ಪರೀಕ್ಷಾ ಕೇಂದ್ರದಲ್ಲಿ ಜೂ.25ರಂದು ಕನ್ನಡ, 27ರಂದು ಗಣಿತ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಇಂದು ಸೋಂಕು ಇರುವುದು ಗೊತ್ತಾಗಿದೆ. ಈ ಬಾಲಕಿಯ ತಂದೆಗೆ ಕರೊನಾ ಪಾಸಿಟಿವ್ ಇರುವ ಬಗ್ಗೆ ನಿನ್ನೆ ದೃಢಪಟ್ಟಿತ್ತು. ಈಕೆಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ವರದಿಯಲ್ಲಿ ಪಾಸಿಟಿವ್​ ಬಂದಿದೆ.ಇದನ್ನೂ ಓದಿರಿಜನರೇ ಎಚ್ಚರ! ಕರೊನಾ ಟೆಸ್ಟ್ ಮಾಡದಂತೆ ಮೇಲಿಂದ ಆರ್ಡರ್​ ಆಗಿದೆ
ಕರೊನಾ ಸೋಂಕಿತ ವಿದ್ಯಾರ್ಥಿನಿಗೆ ನಾಳೆ(ಸೋಮವಾರ) ನಡೆಯಲಿರುವ ವಿಜ್ಞಾನ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿಲ್ಲ. ಸೋಂಕಿತೆಯನ್ನು ಕೋವಿಡ್​ ಆಸ್ಪತ್ರೆಗೆ ಸೇರಿಸಲಾಗಿದೆ.
ಶಾಲೆಯಲ್ಲಿ ದೈಹಿಕ ಅಂತರ, ಸ್ಯಾನಿಟೈಸರ್ ಪ್ರಕ್ರಿಯೆ ಸೇರಿದಂತೆ ಕೋವಿಡ್ ನಿಯಮಾವಳಿ ಅನುಸರಿಸಿದ್ದರಿಂದ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ಇತರ ವಿದ್ಯಾರ್ಥಿಗಳಿಗೆ ಕರೊನಾ ಟೆಸ್ಟ್ ಮಾಡುವ ಅಗತ್ಯ ಇಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ದಿನೇದಿನೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಲ್ಲೂ ಕರೊನಾ ಪಾಸಿಟಿವ್​ ಬರುತ್ತಿರುವುದು ಪೋಷಕರು ಮತ್ತು ಇತರ ಮಕ್ಕಳಲ್ಲಿ ಸೋಂಕಿನ ಭೀತಿ ಆವರಿಸಿದೆ.
ಎಸ್​ಎಸ್​ಎಲ್​ಸಿ ಪರೀಕ್ಷೆಗೂ ಮುನ್ನವೇ ದುರಂತ ಅಂತ್ಯಕಂಡ ವಿದ್ಯಾರ್ಥಿನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + four =
Remember me
