ಬೆಂಗಳೂರು:ನಗರದ ಪೊಲೀಸ್ ಪೇದೆಯೋರ್ವರಿಗೆ ಕರೊನಾ ಸೋಂಕು ತಗುಲಿದೆ. ಈ ಪೊಲೀಸ್ ಪೇದೆ ಏಪ್ರಿಲ್​ 14ರಿಂದ ಕರ್ತವ್ಯಕ್ಕೆ ಹೋಗಿರಲಿಲ್ಲ. ಕಾಲಿಗೆ ಗಾಯ ಆಗಿದ್ದರಿಂದ ರಜೆಯಲ್ಲಿದ್ದರು ಎಂದು ಉನ್ನತ ಮೂಲಗಳು ತಿಳಿಸಿವೆ.
ಬಿದ್ದು ಗಾಯಮಾಡಿಕೊಂಡಿದ್ದ ಪೇದೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಕರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ.
ಇದನ್ನೂ ಓದಿ:ಸೋಂಕಿತರಿಗಿಂತ ಆಸ್ಪತ್ರೆಯಿಂದ ಬಿಡುಗಡೆಯಾದವರೇ ಅಧಿಕ- ನಿಮ್ಮ ಜಿಲ್ಲೆಯ ಸ್ಥಿತಿ ಹೇಗಿದೆ?
ಪೊಲೀಸ್​ ಪೇದೆ 14ರಿಂದ ರಜೆಯಲ್ಲಿ ಇದ್ದರೂ ಅವರಲ್ಲೀಗ ಕರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದರಿಂದ ಸಹಜವಾಗಿ ಪೊಲೀಸ್​ ಇಲಾಖೆಯಲ್ಲಿ ಆತಂಕ ಶುರುವಾಗಿದೆ. ಅವರ ಟ್ರಾವೆಲ್​ ಹಿಸ್ಟರಿ, ಯಾರ ಸಂಪರ್ಕಕ್ಕೆ ಹೋಗಿದ್ದರು ಎಂಬಿತ್ಯಾದಿ ವಿವರಗಳನ್ನು ಪೇದೆಯಿಂದಲೇ ತಿಳಿದುಕೊಳ್ಳಲಾಗುವುದು ಎಂದು ಪೊಲೀಸ್ ಹಿರಿಯ ಅಧಿಕಾರಿಗಳು ತಿಳಿಸಿದ್ದರು.
ಇದನ್ನೂ ಓದಿ:ಚೀನಾ ಕೋವಿಡ್​ 19ರ ತೀವ್ರತೆಯನ್ನು ಬೇಕೆಂದೇ ಬಚ್ಚಿಟ್ಟಿತ್ತು: ಅಮೆರಿಕದ ವರದಿ
ಹಾಗೇ ಯಾರಾದರೂ ಸಿಬ್ಬಂದಿ ಅವರ ಸಂಪರ್ಕಕ್ಕೆ ಹೋಗಿದ್ದರೆ ಅವರನ್ನು ಕ್ವಾರಂಟೈನ್​ಗೆ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:VIDEO| ಈ ಅಂಗಡಿಯಲ್ಲಿ ಎಣ್ಣೆ ಖರೀದಿಸುವವರಿಗೆ ಮಾಲೀಕರು ವಿಶೇಷ ವ್ಯವಸ್ಥೆ ಕಲ್ಪಿಸಿದ್ದಾರೆ, ಅದು ಏನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + five =
Remember me
