ಉಡುಪಿ:ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದ ಜಿಲ್ಲೆಗೆ ಗುರುವಾರ ಕರೊನಾ ಚಂಡ ಮಾರುತ ಅಪ್ಪಳಿಸಿದ್ದು, ಒಂದೇ ದಿನ 16 ಮಕ್ಕಳು ಸಹಿತ 27 ಕರೊನಾ ಪಾಸಿಟಿವ್ ಪತ್ತೆಯಾಗಿದೆ. ಮಹಾರಾಷ್ಟ್ರ ರಾಜ್ಯ ಮುಂಬೈನಿಂದ ಆಗಮಿಸಿದ 23 ಮಂದಿ, ತೆಲಂಗಾಣದಿಂದ ಆಗಮಿಸಿದ್ದ ಮೂವರು, ಕೇರಳದಿಂದ ಬಂದಿದ್ದ ಒಬ್ಬರಿಗೆ ಕರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಇದನ್ನೂ ಓದಿ:ವಿವಾಹಿತೆಯೊಂದಿಗೆ ಯುವತಿ ಆತ್ಮಹತ್ಯೆ: ಸಮಾಜ ಒಪ್ಪದ ಸಂಬಂಧವೇ ಇಬ್ಬರಿಗೂ ಮುಳುವಾಯಿತಾ?
ಕರೊನಾ ಸೋಂಕಿತ ವ್ಯಕ್ತಿಗಳನ್ನುಪ್ರತ್ಯೇಕ ಕ್ವಾರಂಟೈನ್ ಮಾಡಿ, ಇವರಿಂದ ಪ್ರಾಥಮಿಕ, ದ್ವೀತಿಯ ಹಂತದ ಸಂಪರ್ಕಗೊಂಡವರ ಪರಿಶೀಲನೆ ಮತ್ತು ಗಂಟಲು ದ್ರವ ಪರೀಕ್ಷೆಗೆ ಸಿದ್ಧತೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಕಳೆದ ಮಾ.29ರವರೆಗೆ ಕಾಣಿಸಿಕೊಂಡಿದ್ದು ಮೂರು ಪ್ರಕರಣಗಳು ಮಾತ್ರ. ಅನಂತರ ಮೇ 15ರವರೆಗೆ ಯಾವುದೇ ಪಾಸಿಟಿವ್ ಪತ್ತೆಯಾಗಿರಲಿಲ್ಲ. ಮೇ 15ರಂದು ದುಬೈಯಿಂದ ಆಗಮಿಸಿದ ಆರು ಮಂದಿಯಲ್ಲಿ ಕೊರೋನ ಪಾಸಿಟಿವ್ ಕಾಣಿಸಿಕೊಂಡ ಬಳಿಕ ಮೇ.20ರವರೆಗೆ ಮತ್ತೆ ಹೊಸದಾಗಿ 18 ಪ್ರಕರಣಗಳು ವರದಿಯಾಗಿದ್ದವು. ಇದರಲ್ಲಿ 17 ಸಕ್ರೀಯವಾಗಿದ್ದು, 3 ಮಂದಿ ಗುಣಮುಖರಾಗಿದ್ದಾರೆ, 54 ವರ್ಷ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಇದೀಗ ಜಿಲ್ಲೆಯಲ್ಲಿ ಕರೊನಾ ಪಾಸಿಟಿವ್ ಸಂಖ್ಯೆ 45ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದಿರುವ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದ ಸಾಕಷ್ಟು ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷೆ ಇಂದು-ನಾಳೆ ಬರಬಹುದಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಚೀನಾದಲ್ಲಿ ಮತ್ತೆ ಲಾಕ್​ಡೌನ್​: ಕರೊನಾ ಕುರಿತು ಮತ್ತೊಂದು ಶಾಕಿಂಗ್​ ವರದಿ ನೀಡಿದ ಚೀನಾ ವೈದ್ಯರು!
ಕ್ವಾರಂಟೈನ್​ ಮುಗಿಯುತ್ತಿದ್ದಂತೆ ಗಂಡ, ಮಗುವನ್ನು ಬಿಟ್ಟು ಪ್ರಿಯಕರನೊಂದಿಗೆ ಮಹಿಳೆ ಪರಾರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
