ಬೆಂಗಳೂರು:ಕಾಂಗ್ರೆಸ್ ನೂತನ ಕಚೇರಿಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷರ ಪ್ರತಿಜ್ಞೆ ಸ್ವೀಕಾರ ಸಮಾರಂಭದ ಟ್ರಯಲ್​ ನಡೆಯಿತು.
ಕೆಪಿಸಿಸಿ ಅಧ್ಯಕ್ಷರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ಜುಲೈ 2ಕ್ಕೆ ನಿಗಧಿಯಾಗಿದ್ದು, ಪೂರ್ವಭಾವಿ ಸಭೆ ಮಂಗಳವಾರ ನಡೆಯಿತು. ಈ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯ ಸರ್ಕಾರ ಅನುಮತಿ ಕೊಟ್ಟದ್ದು 150 ಜನರಿಗಷ್ಟೆ. ಆದರೆ, ಸುಮಾರು 500 ಜನರು ಪಾಲ್ಗೊಳ್ಳುವ ಮೂಲಕ ಕರೊನಾ ನಿಯಮವನ್ನು ಗಾಳಿಗೆ ತೂರಿದ್ದಾರೆ.ಇದನ್ನೂ ಓದಿರಿವಿಧಾನ ಪರಿಷತ್‌ಗೆ ಇಂಚರ ಅವಿರೋಧ ಆಯ್ಕೆ
ಬೆಂಗಳೂರಿನಲ್ಲಿ ದಿನೇದಿನೆ ಕರೊನಾ ಸೋಂಕಿತರ ಸಂಖ್ಯೆ ಉಲ್ಬಣಿಸುತ್ತಿದೆ. ಹೀಗಿದ್ದರೂ ಕಾಂಗ್ರೆಸ್​ ಕಚೇರಿಯಲ್ಲಿ ನಡೆದ ಪ್ರತಿಜ್ಞಾ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳದೆ ನೂಕುನುಗ್ಗಲು ಏರ್ಪಟ್ಟಿತ್ತು.
ಹಲವರು ಥರ್ಮಲ್ ಸ್ಕ್ರೀನಿಂಗ್ ಮಾಡಿಸಿಕೊಳ್ಳದೆ ನೂತನ ಕಚೇರಿಯ ಸಭಾಂಗಣಕ್ಕೆ ಹೋಗುತ್ತಿದ್ದ ದೃಶ್ಯ ಕಂಡು ಬಂತು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಖರ್ಗೆ ರಾಮಲಿಂಗಾರೆಡ್ಡಿ ಸೇರಿ ಶಾಸಕರು, ವಿವಿಧ ಭಾಗಗಳಿಂದ ಕೆಪಿಸಿಸಿ ಮಾಜಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳು ಪಾಲ್ಗೊಂಡಿದ್ದರು.
ಮತ್ತೆ 20 ದಿನ ದೇಶಾದ್ಯಂತ ಕಂಪ್ಲೀಟ್​ ಲಾಕ್​ಡೌನ್​?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
