ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ತೀವ್ರತೆ ಹೆಚ್ಚಾಗಿದ್ದು, ಭಾನುವಾರ ಹೊಸದಾಗಿ 3,082 ಕರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಸೋಂಕು ಖಚಿತತೆ ಪ್ರಮಾಣ 2.89ಕ್ಕೆ ಏರಿಕೆಯಾಗಿದೆ. ಐದು ತಿಂಗಳ ಹಿಂದೆ 3 ಸಾವಿರಕ್ಕೂ ಅಧಿಕ ಕೋವಿಡ್ ಪ್ರಕರಣ ಪತ್ತೆಯಾಗಿದ್ದವು. ನಂತರ ಕಡಿಮೆಯಾಗಿದ್ದ ಸೋಂಕು ಪ್ರಕರಣ 2ನೇ ಅಲೆ ಕಾಣಿಸಿಕೊಂಡ ನಂತರ ಪುನಃ 3 ಸಾವಿರ ಗಡಿ ದಾಟಿದೆ. ಒಟ್ಟು ಸೋಂಕಿತರ ಸಂಖ್ಯೆ 9,87,012ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ 1,285 ಮಂದಿ ಗುಣಮುಖರಾಗಿದ್ದು, ಈವರೆಗೆ 9.51 ಲಕ್ಷ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 23,037ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಗಂಭೀರ ಆರೋಗ್ಯ ಸ್ಥಿತಿಯಲ್ಲಿರುವ 204 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸೋಂಕಿಗೆ 12 ಬಲಿ:ಕರೊನಾ ಸೋಂಕಿನಿಂದ ಬಳಲುತ್ತಿದ್ದ 12 ಮಂದಿ ಭಾನುವಾರ ಸಾವಿಗೀಡಾಗಿದ್ದಾರೆ. ಈ ಮೂಲಕ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 12,504ಕ್ಕೆ ತಲುಪಿದೆ.
ಎರಡನೇ ಮದ್ವೆ ಆಗಲು ಹೊರಟವನನ್ನು ಸ್ಥಳಕ್ಕೇ ತೆರಳಿ ತಡೆದ ಪತ್ನಿ; ಠುಸ್ ಆಯ್ತು ಒಬ್ಳಿಗೆ ಕೈಕೊಟ್ಟು ಇನ್ನೊಬ್ಬಳ ಕೈಹಿಡಿಯೋ ಯತ್ನ

ನಾಳೆಯಿಂದ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆ ಮೂನ್ಸೂಚನೆ..

ನಾನು ನೀವು ಹೋಗಿ ಅವರ ಬಟ್ಟೆ ಬಿಚ್ಚಿದ್ವಾ? ಆ ಯಪ್ಪ ಎದುರಿಗೆ ಸಿಕ್ಕಾಗ ಏನು ಹೇಳಬೇಕೋ ಹೇಳುತ್ತೇನೆ: ಸಿಡಿ ಕೇಸ್​ ಬಗ್ಗೆ ಡಿ.ಕೆ. ಸುರೇಶ್ ಸಿಡಿಮಿಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 19 =
Remember me
