ಬೆಂಗಳೂರು:ಕರೊನಾದಿಂದ ಗುಣಮುಖರಾದವರಲ್ಲಿ ಮತ್ತೊಮ್ಮೆ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.
ಕರೊನಾ ಟೆಸ್ಟಿಂಗ್ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ಫೋರ್ಟಿಸ್ ಆಸ್ಪತ್ರೆಯಲ್ಲಿ ಕರೊನಾದಿಂದ ಗುಣಮುಖರಾಗಿದ್ದ 27 ವರ್ಷದ ಮಹಿಳೆಗೆ ಮತ್ತೊಮ್ಮೆ ಸೋಂಕು ಕಾಣಿಸಿಕೊಂಡಿರುವ ಬಗ್ಗೆ ಪ್ರಸ್ತಾಪಿಸಿದರು. ಇತರ ರಾಷ್ಟ್ರಗಳಲ್ಲೂ ಈ ರೀತಿಯ ಪ್ರಕರಣಗಳು ಕಂಡು ಬಂದಿದ್ದು, ಒಂದೊಂದು ದೇಶದಲ್ಲೂ ಒಂದೊಂದು ರೀತಿ ಕಾರಣ ಕೇಳಿಬಂದಿವೆ. ನಮ್ಮಲ್ಲೂ ಇಂಥ ಪ್ರಕರಣ ಬೆಳಕಿಗೆ ಬಂದಿರುವುದು ಆತಂಕದ ವಿಷಯ. ಇದನ್ನು ಸೂಕ್ಷ್ಮ ರೀತಿಯಲ್ಲಿ ನಿರ್ವಹಿಸುವ ಮೂಲಕ ಜನರಲ್ಲಿ ಮತ್ತೊಮ್ಮೆ ಕರೊನಾ ಬಾಧಿಸುತ್ತದೆಂಬ ಆತಂಕ ದೂರ ಮಾಡಬೇಕು ಎಂದರು. ಕರೊನಾದಿಂದ ಗುಣಮುಖರಾದವರ ದೇಹದಲ್ಲಿ ಬಿಳಿರಕ್ತ ಕಣಗಳ ಮರು ಉತ್ಪಾದನೆಗೆ ಕನಿಷ್ಠ 15 ದಿನಗಳ ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ಕೆಲವರಿಗೆ ಸೋಂಕು ಮತ್ತೊಮ್ಮೆ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಆದರೆ, ಇದೇ ಕಾರಣ ಎಂದು ಸ್ಪಷ್ಟವಾಗಿ ಹೇಳಲಾಗದು ಎಂದು ಸಭೆಯಲ್ಲಿ ತಜ್ಞರು ವಿವರಿಸಿದರು.
ಶೀಘ್ರ ವರದಿ ಸಲ್ಲಿಸಲು ಸೂಚನೆ:ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಮತ್ತೊಮ್ಮೆ ಕರೊನಾ ಸೋಂಕು ಕಾಣಿಸಿಕೊಳ್ಳಲು ಕಾರಣ ಏನು ಎಂಬುದರ ಬಗ್ಗೆ ನಿಖರತೆ ಬೇಕು. ಜತೆಗೆ ಇತರ ರಾಜ್ಯಗಳಲ್ಲಿ ಇಂಥ ಪ್ರಕರಣಗಳಲ್ಲಿ ಅಳವಡಿಸಿಕೊಂಡಿರುವ ಚಿಕಿತ್ಸಾ ಕ್ರಮದ ಬಗ್ಗೆ ಶೀಘ್ರವೇ ವರದಿ ಸಲ್ಲಿಸುವಂತೆ ಸೂಚಿಸಿದರು. ಅಷ್ಟೇ ಅಲ್ಲದೆ, ಕರೊನಾದಿಂದ ಗುಣಮುಖರಾದವರ ಮೇಲೆ ಯಾವ ರೀತಿ ನಿಗಾ ವಹಿಸಲಾಗುತ್ತಿದೆ? ಅವರು ಅನುಸರಿಸಬೇಕಾದ ಎಚ್ಚರಿಕೆ ಹಾಗೂ ಇತರ ಕ್ರಮಗಳ ಬಗ್ಗೆ ಯಾವ ರೀತಿ ಅರಿವು ಮೂಡಿಸಲಾಗಿದೆ ಎಂಬ ವಿಷಯಗಳ ಬಗ್ಗೆ ಮಾಹಿತಿ ಪಡೆದರು.
ಬೂತ್ ಮಟ್ಟದ ಸಮಿತಿಗೆ ಜವಾಬ್ದಾರಿ:ಕರೊನಾ ನಿಯಂತ್ರಣ ಬೂತ್ ಮಟ್ಟದಿಂದ ಮಾತ್ರ ಸಾಧ್ಯ ಎಂಬುದನ್ನು ಮೊದಲಿನಿಂದಲೂ ಪ್ರತಿಪಾದಿಸಿದ್ದೇವೆ. ಬೂತ್ ಮಟ್ಟದಲ್ಲಿ ಸಮಿತಿ ರಚಿಸಿ, ಜಾಗೃತಿ ಮೂಡಿಸುವುದು ಹಾಗೂ ಕರೊನಾ ಪರೀಕ್ಷೆ ನಡೆಸುವುದರಿಂದ ಸುಲಭವಾಗಿ ಸೋಂಕು ಹರಡುವಿಕೆ ನಿಯಂತ್ರಣ ಸಾಧ್ಯ. ಈ ಜವಾಬ್ದಾರಿಯನ್ನು ಪಂಚಾಯತ್ ರಾಜ್ ಮತ್ತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ವಹಿಸಿದರೆ ಇದರ ನಿರ್ವಹಣೆ ಸುಲಭ ಎಂದು ಡಾ.ಕೆ.ಸುಧಾಕರ್ ತಿಳಿಸಿದರು.
ಕರೊನಾ ಲಸಿಕೆ ಅನಾವರಣಗೊಳಿಸಿದ ಚೀನಾ; ಅಂತಿಮ ಹಂತದ ಫಲಿತಾಂಶದ ಬಳಿಕ ಬಳಕೆಗೆ ಮುಕ್ತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 3 =
Remember me
