ಬೆಂಗಳೂರು:ಒಂದೆಡೆ ಕರೊನಾ ಪರಿಸ್ಥಿತಿ ಕಗ್ಗಂಟಾಗುತ್ತಿದ್ದು, ಸೋಂಕಿತರ ಸಂಖ್ಯೆಯ ಜತೆಗೆ ಸೋಂಕಿಗೆ ಒಳಗಾಗಿ ಸಾಯುತ್ತಿರುವವರ ಸಂಖ್ಯೆಯೂ ಹೆಚ್ಚಳವಾಗುತ್ತಿದ್ದರೆ, ಇನ್ನೊಂದೆಡೆ ಕರೊನಾ ಕಾರ್ಯಪಡೆ ಅಧ್ಯಕ್ಷರೇ ಬದಲಾಗಿದ್ದಾರೆ. ಹೇಗಾದರೂ ಕರೊನಾ ಪರಿಸ್ಥಿತಿಯನ್ನು ತಹಬದಿಗೆ ತರಬೇಕು ಎಂದು ಪ್ರಯತ್ನಿಸುತ್ತಿರುವ ಸಿಎಂ ಯಡಿಯೂರಪ್ಪ ಇಂದು ಕರೊನಾ ಕಾರ್ಯಪಡೆಯನ್ನು ಪುನರ್ ರಚಿಸಿದ್ದಾರೆ.
ಕರೊನಾ ಸೋಂಕು ನಿಯಂತ್ರಣ ಕ್ರಮಗಳ ಪರಾಮರ್ಶೆಗಾಗಿ‌ ಕಾರ್ಯಪಡೆಯನ್ನು ಪುನರ್ ರಚಿಸಿರುವ ಸಿಎಂ ಯಡಿಯೂರಪ್ಪ, ಕಾರ್ಯಪಡೆಯ ಈ ಹಿಂದಿನ ಅಧ್ಯಕ್ಷರನ್ನು ತೆರವುಗೊಳಿಸಿ ನೂತನ ಅಧ್ಯಕ್ಷರನ್ನಾಗಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ನೇಮಿಸಿದ್ದಾರೆ. ಸಚಿವರಾದ ಎಸ್. ಸುರೇಶ್ ಕುಮಾರ್, ಸಿ.ಸಿ. ಪಾಟೀಲ್ ಹಾಗೂ ಡಾ.ಕೆ. ಸುಧಾಕರ್ ಈ ಕಾರ್ಯಪಡೆ ಸದಸ್ಯರಾಗಿದ್ದಾರೆ.
ಕಾರ್ಯಪಡೆಗೆ ಅಗತ್ಯವಾದ ಮಾಹಿತಿ ನೀಡುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಸಿಎಂ ಯಡಿಯೂರಪ್ಪ ಒಪ್ಪಿಸಿದ್ದಾರೆ. ಕರೊನಾ ಕಾರ್ಯಪಡೆಗೆ ಇದುವರೆಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಅಧ್ಯಕ್ಷರಾಗಿದ್ದರು.
ಸ್ಮಶಾನದಲ್ಲೂ ಹೌಸ್​ಫುಲ್ ಬೋರ್ಡ್! ಶವಗಳ ಹೊತ್ತು ಕ್ಯೂ ನಿಂತ ಆಂಬುಲೆನ್ಸ್

ಡಿಸೆಂಬರ್‌ವರೆಗೂ ಇರುತ್ತೆ ಈ ಕರೊನಾ ಕಾಟ: ಎಚ್ಚರಿಕೆ ನೀಡಿದ ಡಾ. ಮಂಜುನಾಥ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − four =
Remember me
