ಬೆಂಗಳೂರು: ಕರೊನಾ ಸೋಂಕು ಇದೀಗ ಚಿತ್ರರಂಗವನ್ನು ಕಾಡತೊಡಗಿದೆ. ಕೆಲ ದಿನಗಳ ಹಿಂದಷ್ಟೇ ನಟಿ, ಸಂಸದೆ ಸುಮಲತಾ ಅಂಬರೀಷ್‌ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡಿತ್ತು. ಅವರೀಗ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದರ ಬೆನ್ನಲ್ಲೇ ಇದೀಗ ಅವರ ನಿಕಟವರ್ತಿಯಾಗಿರುವ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರಿಗೂ ಕರೊನಾ ಸೋಂಕು ಕಾಣಿಸಿಕೊಂಡಿದೆ.
ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ವೆಂಕಟೇಶ್‌ ಅವರ ಗಂಟಲದ್ರವದ ಪರೀಕ್ಷೆ ಮಾಡಿದಾಗ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಇವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೀಗ ಇವರ ಸಂಪರ್ಕಕ್ಕೆ ಬಂದಿರುವ ಚಿತ್ರತಂಡಗಳಿಗೆ ಹಾಗೂ ಇತರರಲ್ಲಿ ಭೀತಿ ಶುರುವಾಗಿದ್ದು, ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುವಂತಾಗಿದೆ.
ಮಾಸ್ಕ್‌ ಧರಿಸದೇ ಕಾರ್ಯಕ್ರಮದಲ್ಲಿ ಸುಮಲತಾ ಭಾಗಿ: ಎಲ್ಲರಲ್ಲೂ ಆತಂಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
