ಬೆಂಗಳೂರು: ಕರೊನಾ ಸೋಂಕು ಹರಡದಂತೆ ತಡೆಯಲು ರಾಜ್ಯ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಈವರೆಗೆ ಗುರುತಿಸಿರುವ ಕೇಸ್​ಗಳ ಪೈಕಿ ಒಬ್ಬರು ಕೂಡ ವೆಂಟಿಲೇಟರ್​ನಲ್ಲಿ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎರಡೆರಡು ಬಾರಿ ಹೇಳಿ ಸ್ಪಷ್ಟಪಡಿಸಿದರು.
ಅವರು ಸಚಿವರು, ಶಾಸಕರು ಮತ್ತು ಅಧಿಕಾರಿಗಳೊಂದಿಗಿನ ಸಭೆಯ ನಂತರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಇದುವರೆಗೆ 128 ಕೊರೊನಾ ಪ್ರಕರಣ ದಾಖಲಾಗಿದ್ದು 4 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಲಾಕ್​ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯ ವಸ್ತುಗಳಿಗೆ ಯಾವುದೇ ಕೊರತೆಯಾಗಿಲ್ಲ. ರಾಜ್ಯಾದ್ಯಂತ 480 ಹಾಪ್ ಕಾಮ್ಸ್ ಮೂಲಕ ರೈತರಿಂದ ಹಣ್ಣು ತರಕಾರಿ ಖರೀದಿಸಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ. ಕರೊನಾ ಸಂಬಂಧ ಹಿರಿಯ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಪಡಿತರ ಚೀಟಿದಾರರಿಗೆ ಮುಂಗಡವಾಗಿ ಪಡಿತರ ವಿತರಣೆ ಮಾಡಲಾಗುತ್ತಿದೆ. ಕಾರ್ಡ್ ಹೊಂದಿರದವರಿಗೂ ಪಡಿತರ ವಿತರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಕರೊನಾ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ವಿಕ್ಟೋರಿಯಾ, ಬೌರಿಂಗ್ ಆಸ್ಪತ್ರೆಯಲ್ಲಿ 650 ಬೆಡ್ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದಲ್ಲಿ ಅಗತ್ಯ ವಸ್ತುಗಳಿಗೆ ಯಾವುದೇ ಕೊರತೆಯಿಲ್ಲ. ಜನತೆ ಅನಗತ್ಯ ಗೊಂದಲ ಮಾಡಿಕೊಂಡು ವಸ್ತುಗಳ ಖರೀದಿಗೆ ದುಂಬಾಲು ಬೀಳುವ ಅಗತ್ಯವಿಲ್ಲ. ಕೊಳಗೇರಿ ಪ್ರದೇಶದ ಜನರಿಗೆ ಉಚಿತ ಹಾಲು ಸರಬರಾಜು ಮಾಡಲಾಗುತ್ತಿದೆ. ಸಂಚಾರಿ ಹಾಪ್ ಕಾಮ್ಸ್ ಮೂಲಕ ಹಣ್ಣು ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯಾದ್ಯಂತ ಲಾಕ್​ಡೌನ್ ಜಾರಿಯಲ್ಲಿದೆ. ಸಾರ್ವಜನಿಕರು ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡದಂತೆ ಮನವಿ ಮಾಡುತ್ತೇನೆ ಎಂದು ಸಿಎಂ ಪುನರುಚ್ಚರಿಸಿದರು.
ಬೆಂಗಳೂರು ಸಚಿವ, ಸಂಸದ, ಶಾಸಕರ ಸಭೆ:ವಿಧಾನ ಸೌಧ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಸಚಿವರು, ಸಂಸದರು ಹಾಗೂ ಶಾಸಕರ ಸಭೆ ನಡೆಯಿತು. ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು. ಬೆಂಗಳೂರಿನಲ್ಲಿ ಕರೊನಾ ವೈರಸ್ ಸೋಂಕಿತರ ಸಂಖ್ಯೆ 51ಕ್ಕೆ ತಲುಪಿರುವುದು, ಲಾಕ್ ಡೌನ್ ಪರಿಸ್ಥಿತಿ ಪರಾಮರ್ಶಿಸಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವುದು, ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿಯದೇ ವಾಸ್ತವಿಕ ನೆಲೆಗಟ್ಟಿನಲ್ಲಿ ಕ್ರಮ, ಸಹಕರಿಸಬೇಕೆಂದು ಮುಸ್ಲಿಂ ರಿಗೆ ತಿಳಿವಳಿಕೆ ನೀಡುವುದು, ‌ಕೊಳಚೆ ಪ್ರದೇಶಗಳಲ್ಲಿ ಜನ ಜಾಗೃತಿ, ನಿರ್ಗತಿಕರು, ವಲಸೆ ಕಾರ್ಮಿಕರು, ಬಡವರಿಗೆ ಊಟೋಪಾಚಾರ, ದಿನಸಿ ಪದಾರ್ಥಗಳ ವಿತರಣೆ, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ, ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ಗಳ ವಿತರಣೆ, ಕ್ವಾರಂಟೈನ್ ನಿಗಾ ಇನ್ನಿತರ ವಿಷಯಗಳು ಚರ್ಚೆಯಾಗಿವೆ.
ಬಾಗಲಕೋಟೆಯಲ್ಲಿ ಕರೊನಾಗೆ ಮೊದಲ ಬಲಿ: 75 ವರ್ಷದ ವೃದ್ದ ಕರೊನಾ ಚಿಕಿತ್ಸೆ ಫಲಿಸದೆ ಸಾವು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − seven =
Remember me
