ಬೆಂಗಳೂರು: ರಾಜ್ಯದಲ್ಲಿ ಭಾನುವಾರ (ಏ.19) ನಾಲ್ವರಿಗೆ ಕರೊನಾ ಸೋಂಕು ಹರಡಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 388ಕ್ಕೆ ಏರಿದೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಧ್ಯಾಹ್ನದ ವರದಿಯಲ್ಲಿ ಸೋಂಕಿತರ ಸಂಖ್ಯೆ ಗಣೀಯವಾಗಿ ಕಡಿಮೆಯಾಗಿದೆ. 105 ಮಂದಿ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಶನಿವಾರ ಸಂಜೆಯಿಂದ ಭಾನುವಾರ 12 ಗಂಟೆವರೆಗೆ ರಾಜ್ಯದಲ್ಲಿ ನಾಲ್ವರು ಹೊಸ ಸೋಂಕಿತರು ಮಾತ್ರ ಪತ್ತೆಯಾಗಿದ್ದಾರೆ. ಮೈಸೂರು ಹಾಗೂ ನಂಜನಗೂಡಿನ ತಲಾ ಇಬ್ಬರಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.
ಮೈಸೂರಿನಲ್ಲಿ ಪತ್ತೆಯಾದ ಇಬ್ಬರು ಸೋಂಕಿತರು ದೆಹಲಿ ಪ್ರಯಾಣ ಮಾಡಿದ್ದಾರೆ. ನಂಜನಗೂಡಿನ ಸೋಂಕಿತರು ರೋಗಿ ಸಂಖ್ಯೆ 52 ಹಾಗೂ ರೋಗಿ ಸಂಖ್ಯೆ 319ರ ಸಂಪರ್ಕಕ್ಕೆ ಬಂದಿದ್ದರು. ಹೀಗಾಗಿ ಇವರಿಗೆ ಸೋಂಕು ಹರಡಿದೆ.ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇದೆ ಮೊದಲ ಬಾರಿಗೆ ಕಡಿಮೆಯಾಗಿದೆ. ಕೆಂಪು ವಲಯದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರಿನಲ್ಲಿ ಸದ್ಯ ಯಾವುದೇ ಸೋಂಕಿತರು ಪತ್ತೆಯಾಗಿಲ್ಲ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 4#COVID19ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸಂಖ್ಯೆ 388ಕ್ಕೆ ಏರಿದೆ. ಇಂದಿನವರೆಗೆ 105 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂಬುದು ಸಮಾಧಾನದ ವಿಷಯವಾಗಿದೆ.#IndiaFightsCornonapic.twitter.com/K2qZddcyhj
— B Sriramulu (@sriramulubjp)April 19, 2020

ಕೇಂದ್ರ ಸರ್ಕಾರವನ್ನು ನಿರ್ದಯ ಸರ್ಕಾರವೆಂದು ಕರೆದ ಪಿ.ಚಿದಂಬರಂ; ಪ್ರಧಾನಿ ಮೋದಿ ಮತ್ತು ನಿರ್ಮಲಾ ಸೀತಾರಾಮನ್​ಗೆ ಎರಡು ಪ್ರಶ್ನೆಗಳು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
