ಮೈಸೂರು: ಬಿಗ್​ಬಾಸ್​ ಖ್ಯಾತಿಯ ದಂಪತಿ ಚಂದನ್​ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರನ್ನು ಕರೊನಾ ವೈರಸ್​ ಪರೀಕ್ಷೆಗೆ ಒಳಪಡಿಸಬೇಕು ಎಂದು ಸಾರ್ವಜನಿಕ ಸಂಘಟನೆಗಳು ಜಿಲ್ಲಾಧಿಕಾರಿಗೆ ಮನವಿ ಮಾಡಿವೆ.
ಚಂದನ್​ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿವಾಹ ನಂತರ ಮಧುಚಂದ್ರಕ್ಕೆ ಫ್ರಾನ್ಸ್​​ಗೆ ತೆರಳಿದ್ದು, ಅಲ್ಲಿಂದ ಹಿಂದಿರುಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ.
ಸಾರ್ವಜನಿಕರ ಮನವಿ ನೋಡಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಚಕಿತಗೊಂಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ನಿರ್ಧಿಷ್ಟವಾಗಿ ಇಂತವರನ್ನೇ ತಪಾಸಣೆ ಮಾಡಿ ಅಂತ ಹೇಳುವ ಹಕ್ಕು ಯಾರಿಗೂ ಇಲ್ಲ. ಕೇಂದ್ರ ಸರ್ಕಾರ ಯಾರನ್ನು ತಪಾಸಣೆಗೊಳಪಡಿಸಬೇಕು ಎಂಬ ಮಾರ್ಗಸೂಚಿಗಳನ್ನು ನೀಡಿದೆ. ಅದರಂತೆ ತಪಾಸಣೆ ಮಾಡುತ್ತೇವೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನಲ್ಲಿ ಇದುವರೆಗೂ ಯಾರಲ್ಲೂ ಕರೊನಾ ವೈರಸ್​ ಸೋಂಕು ಪತ್ತೆಯಾಗಿಲ್ಲ. ನಾಲ್ವರ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದರಲ್ಲಿ ಇಬ್ಬರ ವರದಿ ಬಂದಿದ್ದು ಅವರಲ್ಲಿ ಸೋಂಕು ಇಲ್ಲ ಎಂದು ದೃಢಪಟ್ಟಿದೆ. ಇನ್ನಿಬ್ಬರ ವರದಿ ಶೀಘ್ರವೇ ಬರಲಿದೆ. ಹೀಗಾಗಿ ಸಾರ್ವಜನಿಕರು ಭಯ ಬೀಳುವುದು ಬೇಡ ಎಂದು ಅವರು ಹೇಳಿದರು. (ದಿಗ್ವಿಜಯ ನ್ಯೂಸ್​)
ಬಂಡೀಪುರದಲ್ಲಿ ಕಾಡಾನೆಯತ್ತ ಗುಂಡು ಹಾರಿಸಿದ ಅರಣ್ಯ ಇಲಾಖೆ ಸಿಬ್ಬಂದಿ: ಸೇವೆಯಿಂದ ವಜಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − one =
Remember me
