ಬೆಂಗಳೂರು: ಕರೊನಾ ವೈರಸ್ ಸೋಂಕು ತಗಲುವ ಭೀತಿಯಿಂದ ಜನರು ಮನೆಗಳಿಂದ ಹೊರಬರಲು ಹೆದರುತ್ತಿದ್ದಾರೆ. ಸದಾ ಜನರಿಂದ ಗಿಜಿಗಿಡುತ್ತಿದ್ದ ಶಾಪಿಂಗ್ ಮಾಲ್, ಹೋಟೆಲ್ ಮತ್ತು ಸಿನಿಮಾ ಥಿಯೇಟರ್​ಗಳೆಲ್ಲ ಖಾಲಿ ಹೊಡೆಯುತ್ತಿವೆ.
ಏರ್​ಲೈನ್ಸ್, ಕೈಗಾರಿಕೆ, ಹೋಟೆಲ್ ಸೇರಿ ಬಹಳಷ್ಟು ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟು ಕ್ಷೀಣಿಸಿದೆ. ಪ್ರತಿದಿನ ಸಾವಿರಾರು ಕೋಟಿ ರೂ. ನಷ್ಟವಾಗುತ್ತಿದೆ. ಲಕ್ಷಾಂತರ ಉದ್ಯೋಗಸ್ಥರ ಜೀವನ ನಿರ್ವಹಣೆಗೆ ತೊಡಕು ಉಂಟಾಗಿದೆ.
ಪ್ರವಾಸಿ ತಾಣದಲ್ಲೂ ಜನರಿಲ್ಲ: ಪ್ರವಾಸಿತಾಣಗಳಿಗೂ ಕರೊನಾ ವೈರಸ್​ನ ಬಿಸಿ ತಟ್ಟಿದೆ. ಪ್ರವಾಸಕ್ಕಾಗಿ ಮಾಡಿದ್ದ ಬುಕ್ಕಿಂಗ್ ಅನ್ನು ಜನರು ರದ್ದುಪಡಿಸುತ್ತಿದ್ದಾರೆ. ಹೀಗಾಗಿ ಪ್ರವಾಸಿ ತಾಣಗಳು ಬಿಕೋ ಎನ್ನುತ್ತಿವೆ. ಜನರಿಂದ ಗಿಜಿಗುಡುತ್ತಿದ್ದ ಶಾಪಿಂಗ್ ಮಾಲ್, ಚಿತ್ರಮಂದಿರಗಳು ಜನರಿಲ್ಲದೆ ಭಣಗುಡುತ್ತಿವೆ. ಮಲ್ಟಿಪ್ಲೆಕ್ಸ್​ಗಳಲ್ಲಿ ಸಿನಿಮಾ ನೋಡುವವರ ಸಂಖ್ಯೆ ಶೇ.20
ಹಾಗೂ ಏಕಪರದೆ ಚಿತ್ರಮಂದಿರಗಳಲ್ಲಿ ವೀಕ್ಷಕರ ಸಂಖ್ಯೆ ಶೇ.5 ಇಳಿದಿದೆ. ಚಿಕನ್-ಮಟನ್ ಖರೀದಿಸುವವರ ಸಂಖ್ಯೆ ಶೇ.50 ಕ್ಷೀಣಿಸಿದೆ. ಜನಸಂದಣಿ ಹೆಚ್ಚಿರುವ
ಕಡೆ ಓಡಾಡುವುದರಿಂದ ಕರೊನಾ ಸೋಂಕು ತಗುಲಬಹುದು ಎಂಬ ಆತಂಕದಲ್ಲಿ ಅಂಥ ಪ್ರದೇಶಗಳಿಗೆ ಹೋಗಲು ಜನರು ಹಿಂದೇಟು ಹಾಕುತ್ತಿದ್ದಾರೆ.
ಕರೊನಾ ಚಿಕಿತ್ಸೆಗಾಗಿ ಇನ್ಫೋಸಿಸ್ ಫೌಂಡೇಶನ್​ಗೆ ಆಸ್ಪತ್ರೆ ವಹಿಸಿ ಎಂದು ಕೋರಿದ ಡಾ.ಸುಧಾಮೂರ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
