ಮಂಡ್ಯ:ಸಂಸದೆ ಸುಮಲತಾ ಅಂಬರೀಷ್​ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅವರೇ ತಮ್ಮ ಫೇಸ್​​ಬುಕ್​ನಲ್ಲಿ ಮಾಹಿತಿ ನೀಡಿದ್ದಾರೆ.
ಶನಿವಾರ ತಲೆ ನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ಹಾಗಾಗಿ ಕೊವಿಡ್​-19 ಟೆಸ್ಟ್​ಗೆ ಒಳಗಾಗಿದ್ದೆ. ಇವತ್ತು ವರದಿ ಬಂದಿದ್ದು, ಕೊವಿಡ್​-19 ಇರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ನನ್ನ ಕ್ಷೇತ್ರಗಳ ಕಾರ್ಯದಲ್ಲಿ ತೊಡಗಿಕೊಂಡಿದ್ದೆ. ಕರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ನೀಡಿದ್ದೆ. ಹಾಗಾಗಿ ಸೋಂಕು ತಗುಲಿದೆ. ನನ್ನಲ್ಲಿ ರೋಗನಿರೋಧಕ ಶಕ್ತಿ ಪ್ರಬಲವಾಗಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಖಂಡಿತ ಬೇಗ ಗುಣವಾಗುತ್ತೇನೆ. ಮನೆಯಲ್ಲಿಯೇ ಕ್ವಾರಂಟೈನ್​ ಆಗಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ನಾನು ಭೇಟಿ ಕೊಟ್ಟಿರುವ ಸ್ಥಳ, ವ್ಯಕ್ತಿಗಳ ವಿವರವನ್ನು ಸರ್ಕಾರಿ ಅಧಿಕಾರಿಗಳಿಗೆ ನೀಡಿದ್ದೇನೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕರೊನಾ ಲಕ್ಷಣಗಳು ಕಂಡುಬಂದಿದ್ದರೆ ಕೂಡಲೇ ಪರೀಕ್ಷೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 12 =
Remember me
