ಬೆಂಗಳೂರು:ವಿಶ್ವಾದ್ಯಂತ ಆತಂಕಕ್ಕೆ ಕಾರಣವಾಗಿರುವ ಮಾರಕ ವೈರಸ್​ ಕೊರೊನಾ ಬಗ್ಗೆ ಸುಳ್ಳು ಸುದ್ದಿಗಳೂ ಹಬ್ಬುತ್ತಿವೆ. ಈ ರೋಗ ಹರಡುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳೂ ಬರುತ್ತಲೇ ಇವೆ.
ಅದರಲ್ಲಿ ಕೊರೊನಾ ವೈರಸ್​ ಕೋಳಿ ಮಾಂಸದಿಂದ ಮತ್ತು ಕೋಳಿ ಮೊಟ್ಟೆಗಳಿಂದ ರೋಗ ಹರಡುತ್ತದೆ ಎನ್ನುವುದು ಒಂದು. ಆದರೆ ಇದು ಶುದ್ದ ಸುಳ್ಳು.
ಇಂತಹ ವದಂತಿ/ತಪ್ಪು ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವದಂತಿಗೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ. ಇದರ ಬಗ್ಗೆ ಗೊಂದಲ ಬೇಡ ಎಂದು ಪಶುಸಂಗೋಪನೆ ಹಾಗೂ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಸ್ಪಷ್ಟ ಪಡಿಸಿದ್ದಾರೆ.
ನಮ್ಮ ದೇಶದಲ್ಲಿ ಕೋಳಿಗಳಿಗೆ ಕೊರೊನ ವೈರಾಣು ಸೋಂಕು ಕಾಣಿಸಿಕೊಂಡ ಬಗ್ಗೆ ಇದುವರೆಗೆ ಯಾವುದೇ ವರದಿಗಳಿಲ್ಲ. ಈ ವೈರಾಣು ಸೋಂಕು ಹರಡುವಿಕೆಯಲ್ಲಿ ಕೋಳಿಗಳ ಪಾತ್ರವೇನೂ ಇಲ್ಲ. ಸೋಂಕುಪೀಡಿತ ಮನುಷ್ಯರ ಸಂಪರ್ಕದಿಂದ ಮಾತ್ರ ಈ ಸೋಂಕು ಇತರರಿಗೆ ಹರಡುತ್ತದೆ ಎಂದು ಅವರು ಹೇಳಿದ್ದಾರೆ.
ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯಿಂದಾಗಿ ಕುಕ್ಕುಟ ಉದ್ಯಮಕ್ಕೆ ಪೆಟ್ಟು ಬೀಳುತ್ತಿದೆ. ಸಾಮಾನ್ಯವಾಗಿ ಕೋಳಿ ಮಾಂಸವನ್ನು ೧೦೦ ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಯಲ್ಲಿ ಬೇಯಿಸಲಾಗುತ್ತದೆ. ಈ ಉಷ್ಣತೆಯಲ್ಲಿ ಯಾವುದೇ ವೈರಾಣುಗಳು ಬದುಕುಳಿಯಲು ಸಾಧ್ಯವಿಲ್ಲ. ಆದ್ದರಿಂದ, ಸಾರ್ವಜನಿಕರು ಕೊರೊನಾ ವೈರಾಣು ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿಗಳಿಗೆ ಕಿವಿ ಕೊಡಬಾರದು.
ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಕೋಳಿ ಮಾಂಸ ಮತ್ತು ಮೊಟ್ಟೆ ದೇಹಕ್ಕೆ ಉತ್ತಮ ಪ್ರೋಟೀನ್ ಪೂರೈಸುವ ಆಹಾರವಾಗಿವೆ. ಸಾರ್ವಜನಿಕರ ಹಿತದೃಷ್ಟಿಯಿಂದ ಯಾರೂ ಇಂತಹ ವದಂತಿಗಳನ್ನು ಹರಡಬಾರದು ಎಂದು ಸಚಿವರು ಮನವಿ ಮಾಡಿದ್ದಾರೆ.
ಸಾರ್ವಜನಿಕರಲ್ಲಿ ಯಾವುದೇ ತರಹದ ಸಂದೇಹಗಳಿದ್ದಲ್ಲಿ ಹೆಚ್ಚಿನ ಮಾಹಿತಿಗಾಗಿ 080 23418075, 080 23416431, 080 23417100 ಅಥವಾ ಸಹಾಯವಾಣಿ: 1800 425 012 ಸಂಖ್ಯೆಗಳನ್ನು ಸಂಪರ್ಕಿಸಲು ಸಚಿವರು ಕೋರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + seventeen =
Remember me
