ಕಲಬುರಗಿ: ಕರೊನಾ ವೈರಸ್​ ಭೀತಿಗೆ ಒಳಗಾಗಿರುವ ಚಿತ್ತಾಪುರ ತಾಲೂಕಿನ ಸಂಕನೂರ ಗ್ರಾಮಸ್ಥರು ಎಲ್ಲ ಸಂಪರ್ಕಗಳನ್ನು ಕಡಿದುಕೊಂಡು ಗ್ರಾಮದಲ್ಲೇ ಉಳಿದಿದ್ದಾರೆ.
ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಬಂದ್ ಮಾಡಿದ್ದಾರೆ. ರಸ್ತೆಗಳ ಮೇಲೆ ಕಲ್ಲು ಹಾಗೂ ಮಣ್ಣು ಸುರಿದು ವಾಹನಗಳು ಪ್ರವೇಶಿದಂತೆ ತಡೆದಿದ್ದಾರೆ.
ಗ್ರಾಮಸ್ಥರು ಊರು ಬಿಟ್ಟು ಹೊರ ಹೋಗುವಂತಿಲ್ಲ. ಹೊರಗಿನವರು ಗ್ರಾಮ ಪ್ರವೇಶಿಸುವಂತಿಲ್ಲ ಎಂದು ಮುಖಂಡರು ಸೂಚಿಸಿದ್ದಾರೆ. ಹೀಗಾಗಿ ಎಲ್ಲ ಸಂಪರ್ಕ ಕಳಚಿಕೊಂಡು 21 ದಿನ ಮನೆಯಲ್ಲೇ ಇರಲು ನಿರ್ಧರಿಸಿದ್ದಾರೆ.ಕಲಬುರಗಿ ಜಿಲ್ಲೆ ಅಪಾಯಕಾರಿ ವಲಯದಲ್ಲಿ ಇರುವುದರಿಂದ ಜನರು ಮನೆಯಲ್ಲೇ ಇರುವಂತೆ ಎಚ್ಚರಿಕೆ ನೀಡಿದೆ. ಹೀಗಾಗಿ ಗ್ರಾಮಸ್ಥರು ಕೂಡ ಇದಕ್ಕೆ ಜೋಡಿಸಿದ್ದಾರೆ. (ದಿಗ್ವಿಜಯ ನ್ಯೂಸ್​)
ಕರೊನಾ ಲಸಿಕೆ ಅಭಿವೃದ್ಧಿಗೆ ಹರಸಾಹಸ: ಅಮೆರಿಕ, ಚೀನಾ, ಜರ್ಮನಿ ಸಹಿತ ಹಲವು ರಾಷ್ಟ್ರಗಳಿಂದ ಶ್ರಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − five =
Remember me
