ಆನಂದಪುರ (ಶಿವಮೊಗ್ಗ ಜಿಲ್ಲೆ):ಸಾಗರ ತಾಲೂಕು ನರಸೀಪುರದ ಖ್ಯಾತ ನಾಟಿ ವೈದ್ಯರು ವಿತರಿಸುವ ಗಿಡಮೂಲಿಕೆ ಔಷಧ ವಿತರಣೆಯನ್ನು ಶನಿವಾರದಿಂದ ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಜಿಲ್ಲಾ ವೈದ್ಯಕೀಯ ಅಧಿಕಾರಿಗಳ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನಾಟಿ ವೈದ್ಯರ ಕುಟುಂಬದ ನಾರಾಯಣಮೂರ್ತಿ ತಿಳಿಸಿದ್ದಾರೆ.
ಕ್ಯಾನ್ಸರ್, ಕಿಡ್ನಿ, ಚರ್ಮರೋಗ ಇತ್ಯಾದಿಗಳಿಗೆ ನರಸೀಪುರದಲ್ಲಿ ಕಳೆದ 40 ವರ್ಷಗಳಿಂದ ನಾಟಿ ಔಷಧ ನೀಡಲಾಗುತ್ತಿದೆ. ಇತ್ತೀಚೆಗೆ 7-8 ವರ್ಷಗಳಿಂದ ರಾಜ್ಯ ಮಾತ್ರವಲ್ಲದೆ ಹಾಗೂ ಹೊರ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರಗಳಿಂದಲೂ ಜನರು ಔಷಧ ಪಡೆಯಲು ಆಗಮಿಸುತ್ತಿರುತ್ತಾರೆ.
ಶನಿವಾರ, ಭಾನುವಾರ, ಬುಧವಾರ, ಗುರುವಾರ ಇಲ್ಲಿ ಸಾವಿರಕ್ಕೂ ಹೆಚ್ಚು ಜನರು ಬರುತ್ತಾರೆ. ಹೀಗಾಗಿ ಕೊರೊನಾ ವೈರಸ್ ಹರಡುವ ಹಿನ್ನೆಲೆಯಲ್ಲ್ಲಿ ಮುಂಜಾಗ್ರತಾ ಕ್ರಮವಾಗಿ ಔಷಧ ವಿತರಣೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 16 =
Remember me
