ಬೆಂಗಳೂರು:ಕರ್ನಾಟಕದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೋಂಕಿನ ನಿಯಂತ್ರಣಕ್ಕೆ ಮೇಲ್ವಿಚಾರಕರನ್ನು ನೇಮಿಸಿ ಆದೇಶ ಹೊರಡಿಸಿದೆ. ಉಪ ಮುಖ್ಯಮಂತ್ರಿ ಸೇರಿ ಐವರಿಗೆ ವಿವಿಧ ಜವಾಬ್ದಾರಿಗಳನ್ನು ನೀಡಲಾಗಿದೆ.
ಬೃಹತ್​ ಮತ್ತು ಮಾಧ್ಯಮ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಜಗದೀಶ್​ ಶೆಟ್ಟರ್​ಗೆ ಆಕ್ಸಿಜನ್​ ಸರಬರಾಜು ಮೇಲ್ವಿಚಾರಣೆ ನೀಡಲಾಗಿದೆ. ಉಪಮುಖ್ಯಮಂತ್ರಿಗಳಾದ ಅಶ್ವಥ್​ ನಾರಾಯಣ್​ ಅವರಿಗೆ ರೆಮ್​ಡಿಸಿವಿರ್​ ಹಾಗೂ ಇತರ ಕೋವಿಡ್ ಸಂಬಂಧಿ ಪ್ರಮುಖ ಔಷಧಗಳ ನಿರ್ವಹಣೆ ಹಾಗೂ ಅಗತ್ಯ ಮಾನವ ಸಂಪನ್ಮೂಲ ನಿರ್ವಹಣೆಯ ಮೇಲ್ವಿಚಾರಣೆ ಜವಾಬ್ದಾರಿ ಕೊಡಲಾಗಿದೆ.
ಗೃಹ ಸಚಿವರ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್​ ಅಶೋಕ್​ ಅವರಿಗೆ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆ, ಮೆಡಿಕಲ್​ ಕಾಲೇಜುಗಳಲ್ಲಿ ಬೆಡ್​ ಸಮಸ್ಯೆಗಳ ನಿವಾರಣೆಯ ಮೇಲ್ವಿಚಾರಣೆ ಕೊಡಲಾಗಿದೆ. ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ವಾರ್​ ರೂಂ, ಕಾಲ್ ಸೆಂಟರ್​ಗಳ ನಿರ್ವಹಣೆ ಹಾಗೂ ಸೋಂಕಿತರಿಗೆ ಸೂಕ್ತ ಸಮಯದಲ್ಲಿ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯನ್ನು ನೀಡಲಾಗಿದೆ. ಈ ನಾಲ್ಕು ಮೇಲ್ವಿಚಾರಣೆಯಲ್ಲಿ ಯಾವ ಯಾವ ಕೆಲಸಗಳನ್ನು ಮಾಡಬೇಕಿದೆ ಎನ್ನುವುದನ್ನೂ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಕರೊನಾ ಸಂಕಷ್ಟಕ್ಕೆ ಮಿಡಿದ ಸುದೀಪ್; 300 ಆಕ್ಸಿಜನ್​ ಸಿಲಿಂಡರ್​ ದೇಣಿಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − four =
Remember me
