ಚಾಮರಾಜನಗರ:ಕರೊನಾ ವೈರಸ್​ ಸೋಂಕು ಹರಡುವುದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಲಾಕ್​ಡೌನ್​ಗೆ ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶದವರು ಉತ್ತಮವಾಗಿ ಸಹಕಾರ ನೀಡುತ್ತಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗುಂಡಿಮಾಳ ಗ್ರಾಮಕ್ಕೆ ಗ್ರಾಮಸ್ಥರು ದಿಗ್ಬಂಧನ ವಿಧಿಸಿಕೊಂಡಿದ್ದಾರೆ. ಗ್ರಾಮದಿಂದ ಇತರೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳಿಗೆ ಬೇಲಿ ಹಾಕಿದ್ದಾರೆ. ಗ್ರಾಮದಿಂದ ಯಾರು ಹೊರ ಹೋಗದಂತೆ ಹಾಗೂ ಹೊರಗಡೆಯಿಂದ ಗ್ರಾಮ ಪ್ರವೇಶ ಮಾಡದಂತೆ ಡಂಗೂರ ಸಾರಿದ್ದಾರೆ.
ಅಗತ್ಯ ಇದ್ದಾಗ ಮಾತ್ರ ಹೊರ ಹೋಗುವಂತೆ ಗ್ರಾಮಸ್ಥರಿಗೆ ಸೂಚಿಸಲಾಗಿದೆ. ಹೊರ ಹೋಗುವ ಮೊದಲು ಗ್ರಾಮದ ಉಸ್ತುವಾರಿ ವಹಿಸಿರುವವರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.
ಕರೊನಾ ವೈರಸ್​ ಸೋಂಕು ಹರಡದಂತೆ ಮಾಡಲು ಗ್ರಾಮಗಳಲ್ಲಿ ಗ್ರಾಮಸ್ಥರು ಸ್ವತಃ ದಿಗ್ಬಂಧನ ಹೇರಿಕೊಳ್ಳುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)
ಲಾಕ್‌ಡೌನ್‌ ಲಕ್ಷ್ಮಣ ರೇಖೆಯನ್ನು ದಾಟುವಿರಾ?- ಕಾನೂನು ಸಂಕಷ್ಟದ ಸುಳಿಗೆ ಬೀಳುವುದು ಖಚಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + seventeen =
Remember me
