ಬೆಂಗಳೂರು:ನಗರದ ಜನತೆಯ ಹಿತದೃಷ್ಟಿಯಿಂದ ಹಗಲು ರಾತ್ರಿಯೆನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ಕರೋನಾ ವಾರಿಯರ್ಸ್​ಗೆ ಹಣ ಕೊಟ್ಟು ಕೋವಿಡ್​ ಪರೀಕ್ಷೆಗೆ ಒಳಗಾಗುವಂತೆ ಸರ್ಕಾರ ಸೂಚನೆ ಹೊರಡಿಸಿದೆ. ತನ್ಮೂಲಕ ರಾಜ್ಯ ಸರ್ಕಾರ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ.
ಸರ್ಕಾರಿ ಪ್ರಯೋಗಾಲಯಗಳಿಂದ ಕೋವಿಡ್​ ವರದಿ ಬರುವುದು ತಡವಾಗುತ್ತಿರುವ ಕಾರಣ ಖಾಸಗಿ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡುವಂತೆ ಸರ್ಕಾರ ಕರೊನಾ ವಾರಿಯರ್ಸ್​ಗೆ ಸೂಚಿಸಿದೆ. ಇದರಿಂದಾಗಿ ಅವರೆಲ್ಲರೂ 1,500 ರೂಪಾಯಿ ಪಾವತಿಸಿ ಖಾಸಗಿ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಬೇಕಾದ ಅನಿವಾರ್ಯತೆ ಸಿಲುಕಿಕೊಂಡಿದ್ದಾರೆ.
ಇದನ್ನೂ ಓದಿ:ನನ್ನ ಮಗ ಶರಣಾಗದಿದ್ದರೆ ಕೊಂದು ಬಿಡಿ ಎಂದಿದ್ದ ದುಬೆ ತಾಯಿ ಈಗ ಪೊಲೀಸರ ವಿರುದ್ಧ ತಿರುಗಿಬಿದ್ದಿದ್ದೇಕೆ?
ಈಶಾನ್ಯ ಮತ್ತು ಉತ್ತರ ಠಾಣೆಳಿಗೆ ಸೂಚನೆ ರವಾನೆ: ಬೆಂಗಳೂರು ನಗರದ ವಿವಿಧ ಪೊಲೀಸ್​ ಠಾಣೆಗಳಲ್ಲಿ ಕರ್ತವ್ಯ ನಿರತ ಪೊಲೀಸ್​ ಸಿಬ್ಬಂದಿ ಕರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಇದರಿಂದಾಗಿ ಹಲವು ಠಾಣೆಗಳನ್ನು ಸೀಲ್​ಡೌನ್​ ಮಾಡಲಾಗಿದೆ. ಕೆಲದಿನಗಳ ಹಿಂದೆ ಪೊಲೀಸ್​ ಆಯುಕ್ತರ ಕಚೇರಿಯನ್ನೂ ಸೀಲ್​ಡೌನ್​ ಮಾಡಲಾಗಿತ್ತು.
ಹೀಗಿದ್ದೂ, ಹಣ ಕೊಟ್ಟ ಖಾಸಗಿ ಪ್ರಯೋಗಾಲಯಗಳಲ್ಲಿ ಕೋವಿಡ್​ ಪರೀಕ್ಷೆಗೆ ಒಳಪಡುವಂತೆ ಬೆಂಗಳೂರು ನಗರದ ಈಶಾನ್ಯ ಮತ್ತು ಉತ್ತರ ವಿಭಾಗದ ಎಲ್ಲ ಠಾಣೆಗಳಲ್ಲೂ ನೋಟಿಸ್​ ಅಂಟಿಸಲಾಗಿದೆ. ಹೀಗಾಗಿ ತಮ್ಮ ಕುಟುಂಬದವರ ಹಿತದೃಷ್ಟಿಯಿಂದ ಕೋವಿಡ್​ ಪರೀಕ್ಷೆಗೆ ಒಳಪಡಲು ಬಯಸಿದರೂ ಹಣ ಕೊಡಬೇಕಾದ ಅನಿವಾರ್ಯತೆಯ ಬಗ್ಗೆ ಪೊಲೀಸ್​ ಸಿಬ್ಬಂದಿ ಅಲವತ್ತುಕೊಂಡಿದ್ದಾರೆ.
ಕಾಲೇಜು, ವಿಶ್ವವಿದ್ಯಾಲಯಗಳ ಪರೀಕ್ಷೆಗಳೂ ರದ್ದು; ಇವರೇ ಭಾಗ್ಯವಂತರು…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − four =
Remember me
