ಮಂಡ್ಯ:ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಭಾನುವಾರದ ಅಂತ್ಯಕ್ಕೆ 885 ಸಕ್ರಿಯ ಪ್ರಕರಣಗಳಿವೆ.ಮಂಡ್ಯ ತಾಲೂಕಿನಲ್ಲಿ 319, ಮದ್ದೂರಿನಲ್ಲಿ 95, ಮಳವಳ್ಳಿಯಲ್ಲಿ 68, ಪಾಂಡವಪುರದಲ್ಲಿ 113, ಶ್ರೀರಂಗಪಟ್ಟಣದಲ್ಲಿ 105, ಕೆ.ಆರ್.ಪೇಟೆಯಲ್ಲಿ 95, ನಾಗಮಂಗಲ ತಾಲೂಕಿನಲ್ಲಿ 80 ಹಾಗೂ ಹೊರ ಜಿಲ್ಲೆಯ 10 ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ಚಿಕಿತ್ಸೆ ಬಳಿಕ 39 ಜನರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಂತೆಯೆ 39 ಪ್ರಕರಣ ಹೊಸದಾಗಿ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 16706 ಜನ ಸೋಂಕಿತರಿದ್ದಾರೆ. ಈ ಪೈಕಿ 15679 ಸೋಂಕಿತರು ಚೇತರಿಸಿಕೊಂಡಿದ್ದಾರೆ. 232 ಜನರು ಸರ್ಕಾರಿ ಆಸ್ಪತ್ರೆಯಲ್ಲಿ, 75 ಜನರು ಖಾಸಗಿ ಆಸ್ಪತ್ರೆಯಲ್ಲಿ, 196 ಜನರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಹಾಗೂ 382 ಜನರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + four =
Remember me
