ಚಿಕ್ಕಬಳ್ಳಾಪುರ:ಹಿಂದೆ ರಾಜ್ಯದಲ್ಲಿ ಕರೊನಾ ನಿರ್ವಹಣೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ. ಇದಕ್ಕೆ ಸಾಕ್ಷ್ಯಗಳು ಸಹ ಇವೆ. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿದೆ. ಹಿಂದಿನ ಆರೋಗ್ಯ ಸಚಿವರು ಜೈಲಿಗೆ ಹೋಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ ಬೃಹತ್ ರೋಡ್ ಶೋ ನಡೆಸಿ, ಪ್ರಚಾರ ಕೈಗೊಂಡ ಅವರು, ಕರೊನಾ ಸಂಕಷ್ಟದ ಸಂದರ್ಭದಲ್ಲಿ ಭ್ರಷ್ಟಾಚಾರವೆಸಗಿರುವ ಎನ್‌ಡಿಎ ಅಭ್ಯರ್ಥಿಯನ್ನು ಕಾನೂನಿಗಿಂತಲೂ ಮೊದಲು ಚುನಾವಣೆಯಲ್ಲಿ ಸೋಲಿಸುವ ಮೂಲಕ ಜನತಾ ನ್ಯಾಯಾಲಯದಲ್ಲಿ ಶಿಕ್ಷಿಸಬೇಕು ಎಂದರು.ಭ್ರಷ್ಟಾಚಾರಿ ಪರ ಮತ ಕೇಳಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ಈ ಭಾಗದ ಜನರಿಂದ ತಿರಸ್ಕತಗೊಂಡವರು ಎನ್‌ಡಿಎ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ಮತದಾರರ ಮತಕ್ಕೆ ಹೆಚ್ಚು ಗೌರವ ಬರುತ್ತದೆ ಎಂದರು.ಕೊಟ್ಟ ಮಾತು ಈಡೇರಿಸದ ಬಿಜೆಪಿ ಮತ್ತು ಜೆಡಿಎಸ್ ಗೆ ಮತ ಕೇಳುವ ನೈತಿಕತೆ ಇಲ್ಲ. ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವುದಾಗಿ ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದರು. ಈಗ ಅದೇ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎನ್ನುವುದು ಬಿಜೆಪಿಯ ಭ್ರಮೆ. ಐದೂ ವರ್ಷ ಸರ್ಕಾರ ಸುಭದ್ರವಾಗಿ ಇರಲಿದ್ದು ಮತ್ತೆ ನಾವೇ ಗೆದ್ದು ಅಧಿಕಾರ ಹಿಡಿಯುತ್ತೇವೆ. ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗಲಿದೆ ಎಂದು ಭವಿಷ್ಯ ನುಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 3 =
Remember me
